ಎಎಪಿ ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ನೀಡಿ ಮತಯಾಚಿಸಲಿದೆ: ಮುಖ್ಯಮಂತ್ರಿ ಚಂದ್ರು

ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿವೆ. ನಾವು ಬೇರೆ ಪಕ್ಷಗಳಂತೆ ಮತ ಸೆಳೆಯಲು ಸುಳ್ಳು ಭರವಸೆ ನೀಡುವುದಿಲ್ಲ. ಉತ್ತಮ ಆಡಳಿತ ಒದಗಿಸುವ ಗ್ಯಾರಂಟಿ ಕಾರ್ಡ್ ನೀಡಿ...
ಮುಖ್ಯಮಂತ್ರಿ ಚಂದ್ರು
ಮುಖ್ಯಮಂತ್ರಿ ಚಂದ್ರು

ಶಿರಸಿ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿವೆ. ನಾವು ಬೇರೆ ಪಕ್ಷಗಳಂತೆ ಮತ ಸೆಳೆಯಲು ಸುಳ್ಳು ಭರವಸೆ ನೀಡುವುದಿಲ್ಲ. ಉತ್ತಮ ಆಡಳಿತ ಒದಗಿಸುವ ಗ್ಯಾರಂಟಿ ಕಾರ್ಡ್ ನೀಡಿ ಮತಯಾಚಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಮಂಗಳವಾರ ಹೇಳಿದ್ದಾರೆ. 

ಇಂದು ಶಿರಸಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಪ್ರಮುಖ ರಾಜಕೀಯ ಪಕ್ಷಗಳು ಪ್ರತಿ ಚುನಾವಣೆಗೆ ಪ್ರತ್ಯೇಕ ಪ್ರಣಾಳಿಕೆ ರೂಪಿಸಿ ಜನರನ್ನು ನಂಬಿಸುತ್ತಿವೆ. ಆದರೆ ಆಪ್ ಪ್ರಣಾಳಿಕೆ ಬದಲು ಗ್ಯಾರಂಟಿ ಕಾರ್ಡ್ ನೀಡಿ ಮತ ಯಾಚಿಸಲಿದೆ ಎಂದರು.

ನಾವು ಮತ ಸೆಳೆಯಲು ಸುಳ್ಳು ಭರವಸೆ ನೀಡುವುದಿಲ್ಲ. ಉತ್ತಮ ಆಡಳಿತ ಒದಗಿಸುವ ಗ್ಯಾರಂಟಿ ಕಾರ್ಡ್ ನೀಡುತ್ತೇವೆ ರಾಜ್ಯದಲ್ಲಿ ಕಾಂಗ್ರೆಸ್ ನಶಿಸಿದೆ. ಜೆಡಿಎಸ್ ಕೆಲವೆ ಸೀಟು ಗೆಲ್ಲಲು ಹವಣಿಸುತ್ತಿದೆ‌. ಹೀಗಾಗಿ ರಾಜ್ಯದಲ್ಲಿ ಆಪ್'ಗೆ ಬಿಜೆಪಿ ಮಾತ್ರ ನೇರ ಎದುರಾಳಿ ಎಂದರು.

ನಾವು ಕಾಂಗ್ರೆಸ್, ಬಿಜೆಪಿ ಜೆಡಿಎಸ್ ಓಡಿಸಲು ಪೊರಕೆ ಹಿಡಿದಿದ್ದೇವೆ. ರಾಜ್ಯದಲ್ಲಿ ಆಪ್ ಪರ ಅಲೆ ಗುಪ್ತಗಾಮಿನಿಯಾಗಿದೆ. ಅದು ಚುನಾವಣೆ ವೇಳೆ ಅಪ್ಪಳಿಸಲಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಮುಂದಿನ ವರ್ಷ ಜನವರಿ ಎರಡನೆ ವಾರದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬಳಿಕ ಎಲ್ಲ 224 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು. ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com