2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆ?

''ನನ್ನ ಸಚಿವ ಸಂಪುಟ ವಿಸ್ತರಣೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅದರ ಅಗತ್ಯವನ್ನು ವಿವರಿಸಿದ್ದೇನೆ. ಆದಷ್ಟು ಬೇಗ ಚರ್ಚಿಸಲು ಸಮಯ ಕೋರಿದ್ದೇನೆ'' ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಸಂಜೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿರುವ ಮಾತು. 
ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ

ಬೆಂಗಳೂರು: ''ನನ್ನ ಸಚಿವ ಸಂಪುಟ ವಿಸ್ತರಣೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅದರ ಅಗತ್ಯವನ್ನು ವಿವರಿಸಿದ್ದೇನೆ. ಆದಷ್ಟು ಬೇಗ ಚರ್ಚಿಸಲು ಸಮಯ ಕೋರಿದ್ದೇನೆ'' ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಸಂಜೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿರುವ ಮಾತು. 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಮಾಲೋಚನೆಯ ನಂತರ, ಬೊಮ್ಮಾಯಿ ಅವರು ತಮ್ಮ ಸಂಪುಟದಲ್ಲಿ ಇರುವ ಆರು ಖಾಲಿ ಹುದ್ದೆಗಳನ್ನು ತುಂಬಲು ಸಂಪುಟ ವಿಸ್ತರಣೆಯ ಅನಿವಾರ್ಯತೆಯನ್ನು ಹೇಳಿದ್ದಾರೆ. 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇದು ಅಗತ್ಯ ಎಂದು ಹೇಳಿದ್ದಾರೆ. ಡಿಸೆಂಬರ್ 19 ರಂದು ಪ್ರಾರಂಭವಾಗುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಮೊದಲು ಇದು ಸಂಭವಿಸುತ್ತದೆಯೇ ಎಂಬ ಪ್ರಶ್ನೆಗೆ, ಶಾ ಅವರು ಸಂಬಂಧಪಟ್ಟ ಇತರರೊಂದಿಗೆ ಮಾತುಕತೆ ನಡೆಸಿದ ನಂತರ ಸಮಯ ನೀಡಲಿದ್ದಾರೆ ಎಂದು ಹೇಳಿದ್ದಾರೆ. 

ಈ ಸಂಬಂಧ ಬೆಳವಣಿಗೆಯಲ್ಲಿ, ಆರ್‌ಎಸ್‌ಎಸ್ ಪದಾಧಿಕಾರಿಗಳಾದ ದತ್ತಾತ್ರೇಯ ಹೊಸಬಾಳೆ ಮತ್ತು ಮುಕುಂದ್ ಅವರು ಇತ್ತೀಚೆಗೆ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚುನಾವಣೆಯ ಸಿದ್ಧತೆಗಳ ಬಗ್ಗೆ ಮಾತನಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಮಹತ್ವ, ರಮೇಶ್ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್, ಕೆ.ಎಸ್.ಈಶ್ವರಪ್ಪ ಅವರನ್ನು ಸೇರಿಸಿಕೊಳ್ಳುವ ಅಗತ್ಯದ ಬಗ್ಗೆ ಬೊಮ್ಮಾಯಿ ತಿಳಿಸಿದ್ದಾರೆ. 

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ರಮೇಶ್ ಮತ್ತು ಯೋಗೀಶ್ವರ್ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. "2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬೊಮ್ಮಾಯಿ ಸಂಪುಟ ವಿಸ್ತರಣೆ ಖಚಿತ" ಎಂದು ಬಿಜೆಪಿಯ ಉನ್ನತ ನಾಯಕರೊಬ್ಬರು TNIE ಗೆ ತಿಳಿಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಕುಡಚಿ ಶಾಸಕ ಪಿ.ರಾಜೀವ್, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮತ್ತು ಶೋರಾಪುರ ಶಾಸಕ ನರಸಿಂಹ ನಾಯಕ ಅಲಿಯಾಸ್ ರಾಜುಗೌಡ ಕೂಡ ತಮ್ಮ ಸಮುದಾಯದ ಮೇಲೆ ಹಿಡಿತ ಹೊಂದಿರುವ ಲಂಬಾಣಿ, ಎಸ್‌ಸಿ ಬಲ ಮತ್ತು ಎಸ್‌ಟಿ ನಾಯಕರನ್ನು ಸಂಪುಟಕ್ಕೆ ಸೇರಿಸುವ ಸಾಧ್ಯತೆ ಇದೆ.

ಯುವ ದಿನಾಚರಣೆಗೆ ಮೋದಿ?
ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಮುಂದಿನ ತಿಂಗಳು ನಡೆಯುವ ರಾಷ್ಟ್ರೀಯ ಯುವ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕರ್ನಾಟಕಕ್ಕೆ ಶಾ ಮತ್ತು ಮೋದಿ ಅವರ ಸಮಯವನ್ನು ಹೆಚ್ಚು ಪಡೆಯುವ ಬಗ್ಗೆ ಚರ್ಚೆಗಳು ನಡೆದವು. ಆದರೆ ಅವರ ಭೇಟಿಯ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com