ರಾಜ್ಯ ಕಾಂಗ್ರೆಸ್ ಒಗ್ಗಟ್ಟಾಗಿದೆ: ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಊಹಾಪೊಹಕ್ಕೆ ಡಿಕೆಶಿ ತೆರೆ

ಸಿದ್ದರಾಮಯ್ಯ ಜೊತೆಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆಂಬ ಊಹಾಪೋಹಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ತೆರೆ ಎಳೆದಿದ್ದು, ರಾಜ್ಯ ಕಾಂಗ್ರೆಸ್ ಒಗ್ಗಟ್ಟಿನಿಂದ ಇದೆ ಎಂದು ಹೇಳಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಹುಬ್ಬಳ್ಳಿ: ಸಿದ್ದರಾಮಯ್ಯ ಜೊತೆಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆಂಬ ಊಹಾಪೋಹಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ತೆರೆ ಎಳೆದಿದ್ದು, ರಾಜ್ಯ ಕಾಂಗ್ರೆಸ್ ಒಗ್ಗಟ್ಟಿನಿಂದ ಇದೆ ಎಂದು ಹೇಳಿದ್ದಾರೆ.
 
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿವಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರುು. ವಿಧಾನಸಭೆ ಚುನಾವಣೆಗೆ ಪಕ್ಷದಲ್ಲಿ ನಿರ್ಧಾರ ಕೈಗೊಳ್ಳುವುದು ನಾನೊಬ್ಬನೇ ಅಲ್ಲ, ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಮತ್ತು ಇತರ ಹಿರಿಯ ನಾಯಕರೊಂದಿಗೆ ನನ್ನ ಆಲೋಚನೆಗಳನ್ನು ಹಂಚಿಕೊಳ್ಳುತ್ತೇನೆಂದು ಹೇಳಿದರು.

ಪಕ್ಷದ ಚುನಾವಣಾ ಸಮಿತಿಯು ಬೆಳಗಾವಿಯಲ್ಲಿ ಸಭೆಯನ್ನು ನಡೆಸುತ್ತಿದೆ, ಟಿಕೆಟ್ ಆಕಾಂಕ್ಷಿಗಳು ಕಳುಹಿಸಿರುವ ಅರ್ಜಿಗಳನ್ನು ಪರಿಶೀಲಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.

ಕಳಸಾ ಬಂಡೂರಿ ಮತ್ತಿತರ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೆಲವು ಜಿಲ್ಲೆಗಳಲ್ಲಿ ಬಸ್ ಯಾತ್ರೆ ಹಮ್ಮಿಕೊಳ್ಳಲಾಗುವುದು. ಡಿ.30ರಂದು ವಿಜಯಪುರದಲ್ಲಿ, ಜನವರಿ 2ರಂದು ನವಲಗುಂದದಲ್ಲಿ ಹಾಗೂ ಜನವರಿ 8ರಂದು ಚಿತ್ರದುರ್ಗದಲ್ಲಿ ರ್ಯಾಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಮಂಗಳೂರು ಸ್ಫೋಟ ಪ್ರಕರಣದ ಕುರಿತು ಮಾತನಾಡಿ, ಪೊಲೀಸರು ತನಿಖೆಗೂ ಮುನ್ನವೇ ತೀರ್ಮಾನಕ್ಕೆ ಬಂದಿದ್ದಾರೆ. ನಮ್ಮ ಪಕ್ಷ ಮತ್ತು ನಾನು ಯಾವುದೇ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವಾಗಿದ್ದೇವೆಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com