ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಯಶಸ್ವಿನಿ ಸೋಮಶೇಖರ್ ನೇಮಕ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
Published: 20th December 2022 11:26 PM | Last Updated: 20th December 2022 11:26 PM | A+A A-

ಯಶಸ್ವಿನಿ ಸೋಮಶೇಖರ್
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಶಸ್ವಿ ಸೋಮಶೇಖರ್ ಅವರನ್ನು ಮುಡಾ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಸತೀಶ್ ಕಬಾಡಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ: ಮೈಸೂರಿನಲ್ಲಿ ಸಾರ್ವಜನಿಕವಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ದಂಪತಿ ಬಂಧನ
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಯಶಸ್ವಿನಿ ಸೋಮಶೇಖರ್ ಅವರು, ನಾನು ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಪಕ್ಷ ಬಹಳ ವರ್ಷಗಳ ನಂತರ ನನ್ನನ್ನು ಗುರುತಿಸಿ ಜವಾಬ್ದಾರಿ ನೀಡಿದೆ. ಇದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ನಾಳೆ ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.