ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಸಭಾಪತಿ ಸ್ಥಾನಕ್ಕೆ ಹೊರಟ್ಟಿ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಇತರರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ‌ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.  ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪರಿಷತ್ ಆಡಳಿತ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ಹಾಗೂ ಜಾತ್ಯತೀತ ಜನತಾದಳದ ಸಮಿಶ್ರ ಸರಕಾರದಲ್ಲಿ ಸಚಿವ ಸ್ಥಾನವನ್ನು ಅಲಂಕರಿಸಿದರು. ಈ ಅವಧಿಯಲ್ಲಿ ವಿಜ್ಞಾನ-ತಂತ್ರಜ್ಞಾನ, ಸಣ್ಣ ಉಳಿತಾಯ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com