ಬೇನಾಮಿ ಹೆಸರಲ್ಲಿ ಕಾಮಗಾರಿ, ಪಾಪದ ಹಣ ಹೆಲಿಕಾಪ್ಟರ್ ನಲ್ಲಿ ಹೂವಿನ ರೂಪದಲ್ಲಿ: ಎಚ್ ಡಿಕೆ ವಿರುದ್ಧ ಯೋಗೇಶ್ವರ್ ಆರೋಪ

ಗುತ್ತಿಗೆದಾರರಿಂದ ದಂಧೆ ನಡೆಸಿ, ಆ ಪಾಪದ ಹಣವನ್ನು ಹೆಲಿಕಾಪ್ಟರ್ ನಲ್ಲಿ ಹೂವಿನ ರೂಪದಲ್ಲಿ ಚೆಲ್ಲಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್  ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.
ಸಿ.ಪಿ ಯೋಗೇಶ್ವರ್
ಸಿ.ಪಿ ಯೋಗೇಶ್ವರ್

ರಾಮನಗರ: ರಾಮನಗರ ವಿಧಾನಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಎಂದು ಮಾಜಿ ಸಿಎಂ  ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ, ಇದರ ಬೆನ್ನಲ್ಲೆ ಸುದ್ದಿಗೋಷ್ಠಿ ನಡೆಸಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್  ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಕುಮಾರಸ್ವಾಮಿ ಕುಟುಂಬದ ವಂಶಪಾರಂಪರ್ಯ ರಾಜಕಾರಣಕ್ಕೆ  ಮುಂದಿನ ಚುನಾವಣೆಯಲ್ಲಿ ಜನತೆ ಅಂತ್ಯ ಹಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.  ಕ್ಷೇತ್ರದಲ್ಲಿ 1,500 ಕೋಟಿ ರು. ಅನುದಾನ ತಂದಿರುವುದಾಗಿ ಕುಮಾರಸ್ವಾಮಿ ಹೇಳಿದ್ದು, ಈ ಎಲ್ಲ ಕಾಮಗಾರಿಯನ್ನು ಬೇನಾಮಿ ಹೆಸರಿನಲ್ಲಿ ತಾವೇ ನಡೆಸಿದ್ದಾರೆ. ಗುತ್ತಿಗೆದಾರರಿಂದ ದಂಧೆ ನಡೆಸಿ, ಆ ಪಾಪದ ಹಣವನ್ನು ಹೆಲಿಕಾಪ್ಟರ್ ನಲ್ಲಿ ಹೂವಿನ ರೂಪದಲ್ಲಿ ಚೆಲ್ಲಿಸಿಕೊಳ್ಳುತ್ತಿದ್ದಾರೆ' ಎಂದು ಲೇವಡಿ ಮಾಡಿದರು.

ಕುಮಾರಸ್ವಾಮಿ ಬಗ್ಗೆ ಬಿ.ಎಲ್. ಸಂತೋಷ್ ಹೇಳಿಕೆ ಸರಿಯಾಗಿಯೇ ಇದೆ. ಸಂತೋಷ್ ಜೀ ಅವರ ಬಗ್ಗೆ ವೈಯಕ್ತಿಕ ಟೀಕೆ ಸರಿಯಲ್ಲ. ಅವರು ನಮ್ಮ ನಾಯಕರು ಎಂದರು.  ಸ್ತ್ರೀಶಕ್ತಿ  ಸಂಘಗಳ ಸಾಲ ಮನ್ನಾ ವಿಚಾರದಲ್ಲಿ ಜೆಡಿಎಸ್ ಜನರ ದಿಕ್ಕು ತಪ್ಪಿಸುತ್ತಿದೆ. ಕಳೆದ ಬಾರಿಯೂ ಇವರ ಮಾತು ನಂಬಿಕೊಂಡು ಜನರ ಆಸ್ತಿ ಹರಾಜಾಯಿತು ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com