ಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸಲು ಕೇಶವ ಕೃಪದಲ್ಲಿ ಹುನ್ನಾರ ನಡೆದಿದೆ: ಎಚ್.ಡಿ ಕುಮಾರಸ್ವಾಮಿ

ಕೋವಿಡ್‌ ನಿರ್ಬಂಧದ ಹೆಸರಿನಲ್ಲಿ ಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸುವ ಹುನ್ನಾರ ನಡೆಯುತ್ತಿದೆ. ಈ ಕುರಿತು ಕೇಶವ ಕೃಪದಲ್ಲೇ ಚರ್ಚೆ ನಡೆಸಲಾಗಿದೆ’ ಎಂದು ಜೆಡಿಎಸ್‌ ಶಾಸಕಾಂಗದ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ  ಆರೋಪಿಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಮಂಡ್ಯ: ಕೋವಿಡ್‌ ನಿರ್ಬಂಧದ ಹೆಸರಿನಲ್ಲಿ ಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸುವ ಹುನ್ನಾರ ನಡೆಯುತ್ತಿದೆ. ಈ ಕುರಿತು ಕೇಶವ ಕೃಪದಲ್ಲೇ ಚರ್ಚೆ ನಡೆಸಲಾಗಿದೆ’ ಎಂದು ಜೆಡಿಎಸ್‌ ಶಾಸಕಾಂಗದ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ  ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು ‘ರಥಯಾತ್ರೆಯ ಅಲೆ ಕಂಡು ಬಿಜೆಪಿ ಮುಖಂಡರಿಗೆ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಕೋವಿಡ್‌ ನೆಪದಲ್ಲಿ ಯಾತ್ರೆ ಸ್ಥಗಿತಗೊಳಿಸುವ ಚರ್ಚೆ ನಡೆದಿದೆ. ಕೋವಿಡ್‌ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ. ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ, ಅದಕ್ಕೆ ನಾನೂ ಸಹಕಾರ ನೀಡುತ್ತೇನೆ’ ಎಂದರು.

ವಿಧಾನಸಭಾ ಅಧಿವೇಶನಕ್ಕಿಂತ ನನಗೆ ಪಂಚರತ್ನ ರಥಯಾತ್ರೆಯೇ ಮುಖ್ಯ. ಅಧಿವೇಶನದಲ್ಲಿ ಕುಳಿತು ಮಾತನಾಡಿಬಿಟ್ಟರೆ ಸಮಸ್ಯೆಗಳು ಸರಿಯಾಗುವುದಿಲ್ಲ. ಕಳೆದ ಮೂರು ದಿನಗಳಿಂದ ಅಧಿವೇಶನದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುತ್ತಿದ್ದೇನೆ.  75 ವರ್ಷಗಳಿಂದ ಆಗಿರುವ ಅನಾಹುತಗಳನ್ನು ಸರಿಪಡಿಸಬೇಕಾಗಿದೆ. ಜನರ ನಡುವೆ ಇದ್ದು ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಪ್ರಯತ್ನಿಸುತ್ತಿದ್ಧೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com