ಕಾಂಗ್ರೆಸ್‌ಗೆ ಮಾತ್ರ ಕೋವಿಡ್ ಶಿಷ್ಟಾಚಾರ ಏಕೆ? ಸಿದ್ದು ಪ್ರಶ್ನೆ

ಕಾಂಗ್ರೆಸ್‌ ಪಕ್ಷದ ಭಾರತ್ ಜೋಡೋ ಯಾತ್ರೆಯ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರವನ್ನು  ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ತರಾಟೆಗೆ ತೆಗೆದುಕೊಂಡರು ಮತ್ತು ಕೋವಿಡ್ -19 ಶಿಷ್ಟಾಚಾರ ಕಾಂಗ್ರೆಸ್‌ ಯಾತ್ರೆಗೆ ಮಾತ್ರ ಗುರಿಯಾಗಿದೆಯೇ ಎಂದು ಪ್ರಶ್ನಿಸಿದರು. 
ಕರ್ನಾಟಕ ವಿಧಾನಸಭೆ
ಕರ್ನಾಟಕ ವಿಧಾನಸಭೆ

ಬೆಳಗಾವಿ: ಕಾಂಗ್ರೆಸ್‌ ಪಕ್ಷದ ಭಾರತ್ ಜೋಡೋ ಯಾತ್ರೆಯ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರವನ್ನು  ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ತರಾಟೆಗೆ ತೆಗೆದುಕೊಂಡರು ಮತ್ತು ಕೋವಿಡ್ -19 ಶಿಷ್ಟಾಚಾರ ಕಾಂಗ್ರೆಸ್‌ ಯಾತ್ರೆಗೆ ಮಾತ್ರ ಗುರಿಯಾಗಿದೆಯೇ ಎಂದು ಪ್ರಶ್ನಿಸಿದರು. 

ರಾಜ್ಯ ಬಿಜೆಪಿ ಕೂಡ ಜನಸಂಕಲ್ಪ ಯಾತ್ರೆ ನಡೆಸುತ್ತಿದ್ದು, ಕೇಂದ್ರ ಆರೋಗ್ಯ ಸಚಿವ ಮುನ್‌ಸುಖ್ ಮಾಂಡವಿಯಾ ಅವರು ರಾಜ್ಯ ಬಿಜೆಪಿ ನಾಯಕರಿಗೆ ಕೋವಿಡ್ ಶಿಷ್ಟಾಚಾರ ಬಗ್ಗೆ ಏಕೆ ಪಾಠ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ಭಯದಿಂದ ಬಿಜೆಪಿ ಅದನ್ನು ತಡೆಯಲು ಕೋವಿಡ್ ಶಿಷ್ಟಾಚಾರಗಳನ್ನು ಅಸ್ತ್ರವಾಗಿ ಬಳಸಲು ಪ್ರಯತ್ನಿಸುತ್ತಿದೆ. ಜನರ ಆರೋಗ್ಯದ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಕೇಂದ್ರವು ತಕ್ಷಣವೇ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ಅಧಿಕೃತ ಆದೇಶವನ್ನು ಬಿಡುಗಡೆ ಮಾಡಬೇಕು. ನಂತರ ಅದನ್ನು ಅನುಸರಿಸುತ್ತೇವೆ  ಎಂದರು.

ಜಾನುವಾರುಗಳಲ್ಲಿ ಅನಿಯಂತ್ರಿತವಾಗಿ ಹರಡುತ್ತಿರುವ ಚರ್ಮ ಗಂಟು ರೋಗ ಬಗ್ಗೆ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಪಶು ಸಂಗೋಪನಾ ಇಲಾಖೆ ರೋಗವನ್ನು ನಿಯಂತ್ರಿಸುವಲ್ಲಿ ಮಾತ್ರ ವಿಫಲವಾಗಿಲ್ಲ, ಪ್ರಾಣಿಗಳಿಗೆ ಲಸಿಕೆ ಹಾಕುವಲ್ಲಿ ಹಿಂದುಳಿದಿದೆ ಎಂದು ಆರೋಪಿಸಿದರು.  ಗೋವುಗಳನ್ನು ಸಂರಕ್ಷಿಸುವ ಬದ್ಧತೆಯನ್ನು ಪ್ರಶ್ನಿಸುವ ಮೂಲಕ ಬಿಜೆಪಿ ಸರ್ಕಾರವನ್ನು ಲೇವಡಿ ಮಾಡಿದರು.

ಇದೇ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಜನರ ಪ್ರತಿಕ್ರಿಯೆ ನೋಡಿ ಬಿಜೆಪಿ ಸರ್ಕಾರ ಹೆದರುತ್ತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನ ಬೆಳವಣಿಗೆ ತಡೆಯಲು ಬಿಜೆಪಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಒಂದು ನೆಪವಾಗಿ ತೆಗೆದುಕೊಂಡಿದೆ. ಸಂಭವನೀಯ ಸಾಂಕ್ರಾಮಿಕ ಬೆದರಿಕೆಯನ್ನು ಉಲ್ಲೇಖಿಸಿ ಬಿಜೆಪಿಯು ಚುನಾವಣೆಯನ್ನು ಮುನ್ನಡೆಸಲು ಯೋಜಿಸುತ್ತಿದೆ ಮತ್ತು ಪ್ರಧಾನಿ ಕಾರ್ಯಾಲಯವು ಈಗಾಗಲೇ ಅದರ ಬಗ್ಗೆ ಕೆಲವು ಅಧಿಕಾರಿಗಳಿಗೆ ಮಾಹಿತಿ ನೀಡಿದೆ ಎಂದು ನಮಗೆ ಅನಧಿಕೃತ ಮಾಹಿತಿ ಇದೆ. ಯಾವಾಗ ಬೇಕಾದರೂ ವಿಧಾನಸಭೆ ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com