ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕುಟುಂಬದಿಂದ ಭೂಮಿ ದುರ್ಬಳಕೆ: ಮಣಿಕಂಠ ರಾಠೋಡ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಲು ಸಾಲು ಆರೋಪಗಳನ್ನ ಮಾಡುತ್ತಿರುವ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಇದೀಗ ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
Published: 27th December 2022 09:26 AM | Last Updated: 27th December 2022 09:26 AM | A+A A-

ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಲು ಸಾಲು ಆರೋಪಗಳನ್ನ ಮಾಡುತ್ತಿರುವ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಇದೀಗ ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಳಿಯ ರಾಧಾಕೃಷ್ಣ ಹಾಗೂ ಖರ್ಗೆ ಅವರ ಪುತ್ರ ಪ್ರಿಯಾಂಕ್ ಅವರು ನಡೆಸುತ್ತಿರುವ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿಯು ಜಿಲ್ಲಾಡಳಿತದಿಂದ ಕಲ್ಯಾಣ ಮಂಟಪ ನಿರ್ಮಿಸಲು ಉಚಿತವಾಗಿ ಭೂಮಿ ಪಡೆದು ಇದೀಗ ಸೊಸೈಟಿ ಕಚೇರಿ ನಡೆಸುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದೇನೆ’ ಎಂದು ಮಣಿಕಂಠ ರಾಠೋಡ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಣಿಕಂಠ, ‘ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ತಮ್ಮದೇ ಕುಟುಂಬದಿಂದ ಹಣ ಖರ್ಚು ಮಾಡಿ ಕ್ಷೇತ್ರದ ಜನರಿಗೆ ಉಚಿತವಾಗಿ ಕಲ್ಯಾಣ ಮಂಟಪ ನಿರ್ಮಿಸಿದ್ದಾರೆ. ಆದರೆ, ಖರ್ಗೆ ಕುಟುಂಬದವರು ಸರ್ಕಾರವೇ ಕಲ್ಯಾಣ ಮಂಟಪಕ್ಕೆಂದು ಉಚಿತವಾಗಿ ನೀಡಿದ ಭೂಮಿಯಲ್ಲಿ ಸೊಸೈಟಿ ಕಚೇರಿ ನಡೆಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.
1981 ರಲ್ಲಿ ದಲಿತ ಮದುವೆ ಸಭೆ ಸಮಾರಂಭಗಳಿಗಾಗಿ ಕಲಬುರಗಿ ಜಿಲ್ಲಾಡಳಿತ ಕಲ್ಯಾಣ ಮಂಟಪ ನಿರ್ಮಾಣ ಮಾಡಲು ಡಾ ಅಂಬೇಡ್ಕರ್ ಸ್ಮಾರಕ ಸಮಿತಿಗೆ 36 ಸಾವಿರ ಚದರ ಅಡಿ ಭೂಮಿಯನ್ನ ನೀಡಿತ್ತು. ಜಿಲ್ಲಾಧಿಕಾರಿ ಅವರು ನಿವೇಶನ ಹಂಚಿಕೆ ಸಂದರ್ಭದಲ್ಲಿ ವಿಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದೇನೆ’ ಎಂದರು.