2023 ಅಸೆಂಬ್ಲಿ ಚುನಾವಣೆ: ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯ ನಾಯಕರೊಂದಿಗೆ ಅಮಿತ್ ಶಾ ಚರ್ಚೆ

ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ.  
ರಾಜ್ಯ ಬಿಜೆಪಿ ನಾಯಕರೊಂದಿಗೆ ಅಮಿತ್ ಶಾ ಚರ್ಚೆ
ರಾಜ್ಯ ಬಿಜೆಪಿ ನಾಯಕರೊಂದಿಗೆ ಅಮಿತ್ ಶಾ ಚರ್ಚೆ

ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ.  

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪಕ್ಷದ ಸಚಿವರು, ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ಬೆಂಗಳೂರು ಹೊರತುಪಡಿಸಿ ಹಳೆ ಮೈಸೂರು ಭಾಗದಲ್ಲಿ 35 ಸೀಟ್ ಗೆಲ್ಲಲೇಬೇಕೆಂದು ರಾಜ್ಯ ನಾಯಕರಿಗೆ ಸೂಚನೆ ನೀಡಿರುವುದಾಗಿ ಮೂಲಗಳು ಹೇಳಿವೆ. ಜೆಡಿಎಸ್ ಬ್ಲಾಕ್ ಮೇಲ್ ಮಾಡುತ್ತಿದ್ದು, ಅವರೊಂದಿಗೆ ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆಗೆ ಸಂಪರ್ಕ ಇಟ್ಟುಕೊಳದಂತೆ ಖಡಕ್ ಸೂಚನೆ ನೀಡಿರುವ ಅಮಿತ್ ಶಾ, ಪಕ್ಷದ ಕಾರ್ಯಕರ್ತರ ಜೊತೆಗೆ ಉತ್ತಮ ಸಂಬಂಧ ಇಟ್ಟುಕೊಳ್ಳುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಬಗ್ಗೆ ಸಕಾರಾತ್ಮಕ ಅಲೆ ಇದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಬೂತ್ ಗಳಿಗೆ ತೆರಳಿ ಕಾರ್ಯನಿರ್ವಹಿಸುವಂತೆ ತಿಳಿಸಿರುವ ಅಮಿತ್ ಶಾ,  ಜಿಲ್ಲಾವಾರು ಕ್ಷೇತ್ರ ಗೆಲ್ಲಲು ಟಾರ್ಗೆಟ್ ಹಾಕಿಕೊಳ್ಳಬೇಕು, ಚಾಮರಾಜನಗರ ಜಿಲ್ಲೆಯಲ್ಲಿ 4, ರಾಮನಗರ ಜಿಲ್ಲೆಯಲ್ಲಿ 2 ಕ್ಷೇತ್ರ ಗೆಲ್ಲಬೇಕು ಎಂದು ಸೂಚನೆ ನೀಡಿದ್ದು, ಈ ಭಾಗದಲ್ಲಿ ಜೆಡಿಎಸ್ ಮೊದಲ ಎದುರಾಳಿ, ಕಾಂಗ್ರೆಸ್ ಎರಡನೇ ಎದುರಾಳಿ, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com