ಸಿದ್ದರಾಮಯ್ಯ, ಅಮಿತ್ ಶಾ ಸಾಂದರ್ಭಿಕ ಚಿತ್ರ
ಸಿದ್ದರಾಮಯ್ಯ, ಅಮಿತ್ ಶಾ ಸಾಂದರ್ಭಿಕ ಚಿತ್ರ

ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ: ಅಮಿತ್ ಶಾ ವಿರುದ್ಧ ಸಿದ್ದು ತೀವ್ರ ವಾಗ್ದಾಳಿ

ಮಂಡ್ಯದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಮಂಡ್ಯದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಹುದ್ದೆಯನ್ನೇ 2, 000 ಕೋಟಿ ರೂಪಾಯಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ‌ ಮಾಡುತ್ತಿರುವುದು ತಮಾಷೆಯಾಗಿದೆ ಎಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,ರಾಜ್ಯದಲ್ಲಿ ಆಪರೇಷನ್ ಕಮಲದ ಅನೈತಿಕ ಕೂಸು ಬಿಜೆಪಿ ಸರ್ಕಾರ ಹುಟ್ಟಿಕೊಂಡ ದಿನದಿಂದ ಬಡಜನರಿಗೆ ಸಾವಿನ ಭಾಗ್ಯ, ಭ್ರಷ್ಟರಿಗೆ ಸಂಪತ್ತಿನ ಭಾಗ್ಯ ಬಂದು, ವಿಧಾನಸೌಧವೇ ಕಮಿಷನ್ ಅಡ್ಡೆಯಾಗಿ ಬದಲಾಗಿದೆ. ಶೇ 40 ರಷ್ಟು ಕಮೀಷನ್ ನಲ್ಲಿ ನಿಮ್ಮ‌ ಪಾಲೆಷ್ಟು? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಪಾಲಿನ ಜಿಎಸ್‌ಟಿ ಪರಿಹಾರ ಪೂರ್ಣ ಪ್ರಮಾಣದಲ್ಲಿ ಬಂದಿಲ್ಲ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿಲ್ಲ, ಅತಿವೃಷ್ಟಿ, ಅನಾವೃಷ್ಟಿ, ಬೆಳೆಹಾನಿ ಪರಿಹಾರ ರೈತರಿಗೆ ಸಿಕ್ಕಿಲ್ಲ.ಅಮಿತ್ ಶಾ ಅವರೇ, ಸರ್ಕಾರದ 40% ಕಮಿಷನ್‌‌ನಲ್ಲಿ ನಿಮ್ಮ ಪಾಲು ತಪ್ಪದೆ ಸಂದಾಯ ಆಗುತ್ತಿದೆಯೇ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com