'ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ನಡುವೆ ಜಗಳವಿರಬಹುದು, ಆದರೆ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ'
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಜಗಳ ಇರಬಹುದು, ಆದರೆ ಅದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Published: 03rd February 2022 11:55 AM | Last Updated: 03rd February 2022 12:22 PM | A+A A-

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಜಗಳ ಇರಬಹುದು, ಆದರೆ ಅದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ, ಸಿದ್ದರಾಮಯ್ಯ ನಡುವೆ ಜಗಳ ಇರಬಹುದು, ಅದನ್ನು ನಾನು ಇಲ್ಲ ಎಂದು ಹೇಳುವುದಿಲ್ಲ. ಜಗಳ ಇದ್ದರೂ ಕೂಡ ನಮ್ಮ ಕಾರ್ಯಕರ್ತರು ನಮ್ಮ ಪಕ್ಷದ ಚಿಹ್ನೆಗೆ ಮತ ಹಾಕುವುದು. ಇದರಿಂದ ಪಕ್ಷಕ್ಕೆ ಯಾವುದೇ ನಷ್ಟ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: ಕೈ ನಾಯಕರ ಪಿಸುಮಾತು: ಟಿಕೆಟ್ ಲಾಭಿ ಬಹಿರಂಗ, ಕಾಂಗ್ರೆಸ್ ಗೆ ಮತ್ತೆ ಮುಜುಗರ
ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಎಲ್ಲಾ ಪಕ್ಷಗಳಲ್ಲೂ ಗುಂಪುಗಳಿವೆ. ಒಳ ಜಗಳಗಳಿವೆ. ಬಿಜೆಪಿಯಲ್ಲಿ ಬಿ.ಎಸ್ವೈ, ಆರ್.ಎಸ್.ಎಸ್ ಗುಂಪುಗಳಿವೆ. ಜೆಡಿಎಸ್ ಪಕ್ಷದಲ್ಲೂ ಗುಂಪುಗಾರಿಕೆ ಇದೆ ಹೀಗಾಗಿ ಬಣಗಳ ಸಮಸ್ಯೆ ಇದ್ದರೆ ಹೈಕಮಾಂಡ್ ಬಗೆಹರಿಸಲಿದೆ. ನಮ್ಮಲ್ಲಿ ಗುಂಪುಗಾರಿಕೆಯಿಲ್ಲ, ಇಬ್ಬರ ಅಧೀನದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.