2023 ವಿಧಾನಸಭೆ ಚುನಾವಣೆ: ಪಕ್ಷ ಸಜ್ಜುಗೊಳಿಸಲು ಶೀಘ್ರದಲ್ಲೇ ಬಿಎಸ್'ವೈ ರಾಜ್ಯ ಪ್ರವಾಸ!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಯುಗಾಂತ್ಯವಾಗಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, 2023ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲವರ್ಧನೆಗಾಗಿ ಇನ್ನೆರಡು ವಾರಗಳಲ್ಲಿ ಯಡಿಯೂರಪ್ಪ ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ.
Published: 05th February 2022 08:49 AM | Last Updated: 05th February 2022 03:14 PM | A+A A-

ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಯುಗಾಂತ್ಯವಾಗಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, 2023ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲವರ್ಧನೆಗಾಗಿ ಇನ್ನೆರಡು ವಾರಗಳಲ್ಲಿ ಯಡಿಯೂರಪ್ಪ ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ.
ಯತ್ನಾಳ್ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಸ್ವಲ್ಪ ಹಿಂದೆಯೇ ಪ್ರವಾಸ ಪ್ರಾರಂಭಿಸಬೇಕಿತ್ತು. ಆದರೆ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಇದೀಗ ಕೋವಿಡ್ -19 ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಹದಿನೈದು ದಿನಗಳಲ್ಲಿ ಪ್ರವಾಸವನ್ನು ಪ್ರಾರಂಭಿಸುತ್ತೇನೆಂದು ಹೇಳಿದರು.
ಪ್ರತಿ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಪಕ್ಷವನ್ನು ಬಲಪಡಿಸುವುದು ಪ್ರವಾಸದ ಗುರಿಯಾಗಿದೆ. "ಒಳ್ಳೆಯ ಕೆಲಸ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ನೀತಿಗಳು ಜನರನ್ನು ತಲುಪಿಸುವುದು, 2023 ರಲ್ಲಿ 130-140 ಸ್ಥಾನಗಳನ್ನು ಗೆಲ್ಲಲು ಇದು ನಮಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ- ಸಿದ್ದರಾಮಯ್ಯ ಸೇರಿ ತೃತೀಯ ರಂಗಕ್ಕೆ ಪುನಶ್ಚೇತನ: ನೇಪಥ್ಯಕ್ಕೆ ಸರಿಯಲಿದ್ದಾರಾ ರಾಜಕೀಯ ಮುತ್ಸದ್ಧಿಗಳು?
ಕಳೆದ ಜುಲೈನಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದ ಕೂಡಲೇ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ಮೂಲಕ ಪಕ್ಷದ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿರುತ್ತೇನೆ ಎಂದು ಯಡಿಯೂರಪ್ಪ ಪ್ರತಿಪಾದಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್, ಸಾಮೂಹಿಕ ನಾಯಕತ್ವದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಏಕಾಂಗಿಯಾಗಿ ಹೋಗಲು ಅವರ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಯಿತು.
ತದ ನಂತರ ಯಡಿಯೂರಪ್ಪ ಅವರು ತಮ್ಮ ಪ್ರವಾಸ ಯೋಜನೆಯನ್ನು ಹಲವು ಬಾರಿ ಮುಂದೂಡಬೇಕಾದ ಪರಿಸ್ಥಿತಿ ಎದುರಾಯಿತು. ಪಕ್ಷದ ಒಳಗಿನ ನಾಯಕರು ನೀಡಿರುವ ಮಾಹಿತಿಗಳ ಪ್ರಕಾರ, ಯಡಿಯೂರಪ್ಪ ಇದೀಗ ಮತ್ತೆ ತಮ್ಮ ಪ್ರವಾಸವನ್ನು ಪ್ರಾರಂಭಿಸಲು ಮುಂದಾಗಿದ್ದು, ಅವರ ಮಗ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಪ್ರಬಲ ನಾಯಕರಾಗಿ, ವಿಶೇಷವಾಗಿ ಅವರ ಉತ್ತರಾಧಿಕಾರಿಯಾಗಿ ಸ್ಥಾಪಿಸುವ ತಂತ್ರ ಇದಾಗಿದೆ ಎಂದು ತಿಳಿಸಿದ್ದಾರೆ.