ಡಿಕೆ.ಶಿವಕುಮಾರ್ ವಿರುದ್ಧ ಸಿಎಂ ಇಬ್ರಾಹಿಂ ವಾಗ್ದಾಳಿ
15 ದಿನಗಳಲ್ಲಿ ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿರುವ ಸಿಎಂ ಇಬ್ರಾಹಿಂ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
Published: 06th February 2022 07:38 AM | Last Updated: 07th February 2022 01:10 PM | A+A A-

ಸಿಎಂ ಇಬ್ರಾಹಿಂ
ಬೆಂಗಳೂರು: 15 ದಿನಗಳಲ್ಲಿ ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿರುವ ಸಿಎಂ ಇಬ್ರಾಹಿಂ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಬಿ ಕೆ ಹರಿಪ್ರಸಾದ್ ಅವರಿಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನ ಕೈತಪ್ಪಿರುವುದು ಇಬ್ರಾಹಿಂ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಡಿಕೆ. ಶಿವಕುಮಾರ್ ಕಾರಣ ಎಂದು ಆರೋಪಿಸಿದ ಸಿಎಂ ಇಬ್ರಾಹಿಂ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮೃದು ಧೋರಣೆ ಅನುಸರಿಸಿದರು.
ಇದನ್ನೂ ಓದಿ: ಪಕ್ಷ ತೊರೆದ ಸಿಎಂ ಇಬ್ರಾಹಿಂ: ಕಾಂಗ್ರೆಸ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡರ ಅಸಮಾಧಾನ
ಸಿದ್ದರಾಮಯ್ಯ ಅವರು ಜೆಡಿಎಸ್ ತೊರೆದು ಅಹಿಂದ ವೇದಿಕೆಯನ್ನು ರಚಿಸಿದಾಗ, ನಾನು ಅವರನ್ನು ಅನುಸರಿಸಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದೆ. ಸಿದ್ದರಾಮಯ್ಯ ಅವರಿಗೆ ದ್ರೋಹ ಮಾಡಿದ ಕಾರಣಕ್ಕೆ 2013ರ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ವಿರುದ್ಧ ತಿರುಗಿಬಿದ್ದಿದ್ದೆ ಎಂದು ತಿಳಿಸಿದ್ದಾರೆ.
ಫೆ.14ರಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಇಬ್ರಾಹಿಂ ಅವರು ಇದೀಗ ತಮ್ಮ ಮನಸ್ಸು ಬದಲಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ರಾಜೀನಾಮೆಯು ಮೇಲ್ಮನೆಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕರಿಸಲು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬಲವನ್ನು ನೀಡಲಿದೆ, ಕಾಯ್ದೆ ಕುರಿತು ಸರ್ಕಾರದ ನಡೆಯನ್ನು ಅವಲಂಬಿಸಿ ಇಬ್ರಾಹಿಂ ಅವರು ನಿರ್ಧಾರ ಕೈಗೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ.