ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಶತಃಸಿದ್ಧ: 'ಕೈ' ನಾಯಕರ ಆಸೆಗೆ ಸಿಎಂ ಇಬ್ರಾಹಿಂ 'ಎಳ್ಳುನೀರು'!
ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ, ಅವರು ಪಕ್ಷದಲ್ಲಿಯೇ ಉಳಿಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
Published: 08th February 2022 10:49 AM | Last Updated: 08th February 2022 12:46 PM | A+A A-

ಸಿಎಂ ಇಬ್ರಾಹಿಂ
ಬೆಂಗಳೂರು: ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ, ಅವರು ಪಕ್ಷದಲ್ಲಿಯೇ ಉಳಿಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಸೋಮವಾರ ಇಬ್ರಾಹಿಂ ಅವರ ನಿವಾಸಕ್ಕೆ ತೆರಳಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಹಲವು ತಾಸಿನ ಸಭೆಯ ಬಳಿಕ ಇಬ್ರಾಹಿಂ ಮನಸ್ಸು ಬದಲಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸುಮಾರು ಹೊತ್ತು ಚರ್ಚೆ ನಡೆಸಿ ಕಾಂಗ್ರೆಸ್ ಹಾಗೂ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಇಬ್ರಾಹಿಂ ಅವರ ಮನವೊಲಿಸುವ ಕೆಲಸ ಮಾಡಲಾಗಿದೆ. ಫೆಬ್ರವರಿ 10ರವರೆಗೆ ಅವರು ಸಮಯಾವಕಾಶ ಕೋರಿದ್ದಾರೆ ಎಂದು ಎಚ್.ಸಿ ಮಹಾದೇವಪ್ಪ ಹೇಳಿದ್ದಾರೆ.
ಇದನ್ನೂ ಓದಿ: ಡಿಕೆ.ಶಿವಕುಮಾರ್ ವಿರುದ್ಧ ಸಿಎಂ ಇಬ್ರಾಹಿಂ ವಾಗ್ದಾಳಿ
ಪಕ್ಷ ತೊರೆದು ಜೆಡಿಎಸ್ ಸೇರುವ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. "ನಾನು ನನ್ನ ದಾರಿ ಕಂಡುಕೊಂಡಿದ್ದೇನೆ ಮತ್ತು ಫೆಬ್ರವರಿ 13 ರಂದು ಹುಬ್ಬಳ್ಳಿಯಿಂದ ನನ್ನ ಹಿತೈಷಿಗಳ ಸಭೆಯೊಂದಿಗೆ ಉತ್ತರ ಕರ್ನಾಟಕ ಪ್ರವಾಸ ಮಾಡುತ್ತಿದ್ದೇನೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.