ಇನ್ನೂ ಒಂದು ವರ್ಷ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ ಅನುಮಾನ: ಸಚಿವ ಈಶ್ವರಪ್ಪ
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
Published: 12th February 2022 07:50 AM | Last Updated: 12th February 2022 11:55 AM | A+A A-

ಈಶ್ವರಪ್ಪ
ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಇತ್ತೀಚೆಗೆ ಸುಪ್ರೀಂಕೋರ್ಟ್ ಆದೇಶವೊಂದನ್ನು ನೀಡಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯಕ್ಕೆ ಜಿಲ್ಲಾ ಮತ್ತು ತಾಲೂಕು ಚುನಾವಣೆ ನಡೆಯುವುದು ಅನುಮಾನ. ನಮ್ಮ ಅವಧಿಯಲ್ಲೇ ಆಗುವುದೋ ಅಥವಾ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮನ್ರೇಗಾ, ಜಲ ಜೀವನ್ ಮಿಷನ್ ಯೋಜನೆಗೆ ಅನುದಾನ ಬರುತ್ತಿದೆ: ಸಚಿವ ಕೆ.ಎಸ್.ಈಶ್ವರಪ್ಪ
ಇದು ಹೊಸ ಸವಾಲಾಗಿ ಪರಿಣಮಿಸಿದ್ದು, ಶುಕ್ರವಾರ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ಮುಂದಿನ ಕ್ರಮಗಳ ಕುರಿತು ತಜ್ಞರ ಅಭಿಪ್ರಾಯ ಸಂಗ್ರಹಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಅವರು ಒಬಿಸಿ ಗಳ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಆಯೋಗವನ್ನು ರಚಿಸಬೇಕಿದೆ. ಹೀಗಾಗಿ ಚುನಾವಣೆಗಳು ಶೀಘ್ರದಲ್ಲೇ ನಡೆಯಬಾರದು. ಸಮಸ್ಯೆಗಳಿರುವುದರಿಂದ ಈ ರೀತಿ ಹೇಳಲಾಗುತ್ತಿದೆ. ಒಬಿಸಿಗಳಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಎಸ್ಸಿ ಆದೇಶದ ವಿರುದ್ಧ ನಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಒಬಿಸಿ ಮೀಸಲಾತಿ ಇಲ್ಲದೆಯೆೇ ನಾವು ಚುನಾವಣೆ ನಡೆಸಬಹುದೇ? ಒಬಿಸಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಮೂಲಕ ಚುನಾವಣೆ ನಡೆಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸಚಿವರು, ನಿರ್ದಿಷ್ಟ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.