2023 ಅಸೆಂಬ್ಲಿ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೂ ಆರು ವಾರಗಳಲ್ಲಿ ಪ್ರಕಟ- ಹೆಚ್ ಡಿ ಕುಮಾರಸ್ವಾಮಿ
ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಆರು ವಾರಗಳೊಳಗೆ ಪ್ರಕಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೋಮವಾರ ಹೇಳಿದರು.
Published: 14th February 2022 07:43 PM | Last Updated: 14th February 2022 08:10 PM | A+A A-

ಹೆಚ್ ಡಿ ಕುಮಾರಸ್ವಾಮಿ
ಹಾಸನ: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಆರು ವಾರಗಳೊಳಗೆ ಪ್ರಕಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೋಮವಾರ ಹೇಳಿದರು.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, ಪಕ್ಷಕ್ಕೆ ನಿಷ್ಠರಾಗಿರುವ ಹಿರಿಯ ಮುಖಂಡರಿಗೆ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿರುವುದಾಗಿ ತಿಳಿಸಿದರು.
ಹೆಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ಅಥವಾ ದೇವೇಗೌಡರ ಕುಟುಂಬದಿಂದ ಯಾರಾದರೂ ಸ್ಪರ್ಧಿಸಲಿದ್ದಾರೆಯೇ ಎಂಬ ವದಂತಿಗಳ ಕುರಿತಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಹಾಸನ ವಿಧಾನಸಭಾ ಕ್ಷೇತ್ರದಿಂದ ತಮ್ಮ ಕುಟುಂಬದ ಯಾವುದೇ ಸದಸ್ಯರು ಸ್ಪರ್ಧಿಸಲ್ಲ ಎಂದರು.
ಇದನ್ನೂ ಓದಿ: ಮುಂದಿನ ಚುನಾವಣೆಗೆ ಜೆಡಿಎಸ್ ನೇತೃತ್ವದಲ್ಲಿ 'ಕನ್ನಡಿಗರ ಮಹಾಮೈತ್ರಿಕೂಟ': ಹೆಚ್ ಡಿ ಕುಮಾರಸ್ವಾಮಿ ಘೋಷಣೆ
ಮುಂದಿನ ಚುನಾವಣೆಯಲ್ಲಿ ಹಾಸನ ಪ್ರಮುಖ ಕ್ಷೇತ್ರವಾಗಿ ಪರಿಗಣಿಸಲಾಗುವುದು, ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿಶೇಷ ಗಮನದೊಂದಿಗೆ ಹೊಸ ಯೋಜನೆಗಳು, ಅನುದಾನ ಬಿಡುಗಡೆ ಮೂಲಕ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಹಾಸನ ಜಿಲ್ಲೆಯ ಅಭ್ಯರ್ಥಿಯನ್ನು ದೇವೇಗೌಡರು ನಿರ್ಧರಿಸಲಿದ್ದಾರೆ ಎಂದು ಅವರು ಹೇಳಿದರು.
ಅರಕಲಗೂಡು ಮತ್ತು ಅರಸೀಕೆರೆ ಮುಖಂಡರ ಯಾವುದೇ ಭಿನ್ನಾಭಿಪ್ರಾಯಗಳನ್ನು ಸ್ಥಳೀಯ ಮುಖಂಡರು ಹಾಗೂ ಹೆಚ್ ಡಿ ರೇವಣ್ಣ ಬಗೆಹರಿಸಲಿದ್ದಾರೆ. ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಪಕ್ಷ ಸೇರ್ಪಡೆ ಕುರಿತು ನಂತರ ತೀರ್ಮಾನಿಸಲಾಗುವುದು, ಈ ಬಗ್ಗೆ ಎರಡು ಬಾರಿ ಮಾತನಾಡಿದ್ದಾರೆ, ಅವರು ಜೆಡಿಎಸ್ ಗೆ ಬರುವುದಾದರೆ ಸ್ವಾಗತ ಎಂದರು.
ಹಿಜಾಬ್ ವಿವಾದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಕುಮಾರಸ್ವಾಮಿ, ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷ ಮುಖಂಡರು ಹಿಜಾಬ್ ವಿವಾದವನ್ನು ನಿರ್ಲಕ್ಷಿಸಿದ್ದರಿಂದ ಅದು ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವಂತಾಗಿದೆ. ಇದಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ರಾಜಕೀಯ ಮುಖಂಡರು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ವಿಭಜಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.