ಭಜರಂಗ ದಳ ಕಾರ್ಯಕರ್ತನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್

ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

Published: 22nd February 2022 08:45 AM  |   Last Updated: 22nd February 2022 03:20 PM   |  A+A-


B.k Hari prasad

ಬಿ.ಕೆ ಹರಿಪ್ರಸಾದ್

The New Indian Express

ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

ಪರಿಷತ್ ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು. 

ಕೊಲೆ ಆದ ಯುವಕನ ತಾಯಿ, ತನ್ನ ಮಗ ಎರಡು ವರ್ಷಗಳಿಂದ ಭಜರಂಗದಳದಲ್ಲಿ ಇಲ್ಲ ಅಂತ ಹೇಳಿದ್ದಾರೆ. ಇತ್ತ ಈಶ್ವರಪ್ಪ ಇದು ಮುಸ್ಲಿಂ ಗೂಂಡಾಗಳಿಂದ ಕೊಲೆ ಆಗಿದೆ ಅಂತಾರೆ. ಗೃಹ ಸಚಿವರು ಇದ್ದಾಗ ಇವರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಈ ಕೊಲೆಯನ್ನು ಈಶ್ವರಪ್ಪನೇ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈಶ್ವರಪ್ಪ ಪರೋಕ್ಷವಾಗಿ ಈ ಕೊಲೆ ಮಾಡಿಸಿದ್ದಾರೆ. ಪೊಲೀಸರ ತನಿಖೆ ಮುನ್ನ ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ ಎಂದು ಹೇಳುತ್ತಾ ವಿಷಯವನ್ನು ಹರಿಪ್ರಸಾದ್ ಪ್ರಸ್ತಾಪ ಮಾಡಿದರು. ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೆದಿದ್ದು, ಹರಿಪ್ರಸಾದ್ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಶಿವಮೊಗ್ಗ ಗಲಭೆಗೆ ಸಚಿವ ಈಶ್ವರಪ್ಪನೇ ಕಾರಣ: ಡಿ ಕೆ ಶಿವಕುಮಾರ್

ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಈಶ್ವರಪ್ಪರ ಹೇಳಿಕೆ ಸರಿಯಲ್ಲ. ಇದು ಅಶಾಂತಿ ಸೃಷ್ಟಿಸುವ ಹೇಳಿಕೆಯಾಗಿದೆ. ಇದು ಅವರ ಸ್ಥೂಲ ಕಲ್ಪನೆ, ಅಪರಾಧಿಗಳು ಯಾರು ಎಂಬುದು ಇನ್ನೂ ತನಿಖೆಯೇ ಆಗಿಲ್ಲ. ಈಗಲೇ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸಲು ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ನಾವು ರಾಜೀನಾಮೆ ಕೇಳುತ್ತಿದ್ದೇವೆ, ಅದನ್ನ ಅವರು ಕೊಡಲೇಬೇಕು. ಪೊಲೀಸರ ತನಿಖೆಯಾಗದೆ ಆಪಾದನೆ ಮಾಡುತ್ತಿದ್ದಾರೆ. ಪೊಲೀಸರು ತನಿಖೆ ನಡೆಸುವುದು ಅವರ ಜವಾಬ್ದಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಏನು ಮಾಡುತ್ತಿದೆ. ಡಿ.ಕೆ ಶಿವಕುಮಾರ್ ಮೇಲೆ ಆಪಾದನೆ ಮಾಡಿ ಏನೂ ಸಾಧಿಸಲಾಗದು. ಕ್ರಿಮಿನಲ್ ಹಿನ್ನೆಲೆಯುಳ್ಳವರೇ ಸಚಿವರಾಗಿದ್ದಾರೆ. ಕೋಮು ಬಣ್ಣ ಕಟ್ಟಿ ಯಾರನ್ನೋ ಖಳನಾಯಕ ಮಾಡುವುದು ಈಶ್ವರಪ್ಪ ಅವರಿಗೆ, ಬಿಜೆಪಿ ಅವರಿಗೆ ಹೊಸದಲ್ಲ. ಈ ಹಿಂದೆಯೂ ಶಿವಮೊಗ್ಗದಲ್ಲಿ ಕೊಲೆ ನಡೆದಿತ್ತು, ಆಗಲೂ ಮುಸ್ಲಿಂರ ಮೇಲೆ ಆಪಾದನೆ ಮಾಡಿದ್ರು, ಆ ಬಳಿಕ ಹಿಂದೂಗಳು ತಪ್ಪಿಸ್ಥರು ಅಂತಾ ಗೊತ್ತಾಯ್ತು ಎಂದು ಈಶ್ವರಪ್ಪ ವಿರುದ್ಧ ವಾಗ್ದಾಳಿ
ಮಾಡಿದ್ದಾರೆ.


Stay up to date on all the latest ರಾಜಕೀಯ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • vijay

    Nalappad karnataka congress youth president, DKS - KPCC president, BK Hariprasad leader of opposition in council! where is congress heading towards?
    4 months ago reply
flipboard facebook twitter whatsapp