ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ: ರಾಜ್ಯದ ಪ್ರತಿಷ್ಠೆಗೆ ಕೊಳ್ಳಿ ಇಟ್ಟ ರಾಷ್ಟ್ರೀಯ ಪಕ್ಷಗಳಿಂದ 'ವಿಕೃತ ಕೇಕೆ'!
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
Published: 23rd February 2022 01:00 PM | Last Updated: 23rd February 2022 01:21 PM | A+A A-

ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ʼವಿಕೃತ ಕೇಕೆʼ ಹಾಕುತ್ತಿವೆ ಎಂದು ಬರೆದಿದ್ದಾರೆ.
ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ʼದ್ವೇಷದಳ್ಳುರಿʼ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಯುವಕನ ಕಗ್ಗೊಲೆ ಬಿಜೆಪಿ ಮತ್ತು ಕಾಂಗ್ರೆಸ್ ಸಾಧನೆ, ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣ ಮಾಡಲು ಹೊರಟಿವೆ: ಹೆಚ್ ಡಿ ಕುಮಾರಸ್ವಾಮಿ
ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ʼರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು.
ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ʼದ್ವೇಷದಳ್ಳುರಿʼ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ. 7/8
— H D Kumaraswamy (@hd_kumaraswamy) February 23, 2022
ಹಿಜಾಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ. ಇವೆಲ್ಲಾ ಯಾರಿಂದ ಯಾರಿಗಾಗಿ ನಡೆಯುತ್ತಿವೆ? ಈ ʼಟೂಲ್ ಕಿಟ್ʼ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು. ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು ಕುಮಾರಸ್ವಾಮಿ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.