ಸಂಪುಟ ಪುನಾರಚನೆ ಸಾಧ್ಯತೆ: ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ದಂಡು; ಕೇಂದ್ರ ನಾಯಕರ ಗಮನ ಸೆಳೆಯಲು ಕಸರತ್ತು!
ಸಂಕ್ರಾಂತಿ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗುತ್ತದೆ ಎಂಬ ಊಹಾ ಪೋಹಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
Published: 06th January 2022 02:15 PM | Last Updated: 06th January 2022 02:25 PM | A+A A-

ಎಸ್ ಎ ರಾಮದಾಸ್
ಮೈಸೂರು: ಸಂಕ್ರಾಂತಿ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗುತ್ತದೆ ಎಂಬ ಊಹಾ ಪೋಹಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಸಂಪುಟ ಪುನಾರಚನೆ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಹಲವು ಶಾಸಕರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. 2023ರ ಆರಂಭದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವ ಕಾರಣ, ಕೆಲವು ಶಾಸಕರು ಸಚಿವ ಸ್ಥಾನ ಕೈ ತಪ್ಪಿ ಹೋಗಬಹುದೆಂಬ ಆತಂಕದಲ್ಲಿದ್ದಾರೆ. ಅನೇಕ ಶಾಸಕರು ತಮ್ಮ ಪ್ರದೇಶ ಅಥವಾ ದುರ್ಬಲ ವರ್ಗಗಳಿಗೆ ಪ್ರಾತಿನಿಧ್ಯದ ಬೇಡಿಕೆಯೊಂದಿಗೆ ಪಕ್ಷದ ಹೈಕಮಾಂಡ್‌ನ ಬಾಗಿಲು ತಟ್ಟುತ್ತಿದ್ದಾರೆ.
ಸಚಿವ ಸ್ಥಾನದಿಂದ ವಂಚಿತರಾಗಿರುವ ಬಿಜೆಪಿಯ ಹಿರಿಯ ಶಾಸಕ ಎಸ್‌ಎ ರಾಮದಾಸ್ ಅವರು ಪ್ರಧಾನಿ ಮೋದಿ ಅವರ ಒಲವು ಗಳಿಸುವ ದೃಷ್ಟಿಯಿಂದ ರಸ್ತೆಗಿಳಿದಿದ್ದಾರೆ. ಅವರು 'ಮೋದಿ ಕಾ ಕಾಮ್' ಮೂಲಕ ಆ್ಯಕ್ಟೀವ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಧಾನಿಯವರ ನೆಚ್ಚಿನ ಕಾರ್ಯಕ್ರಮಗಳನ್ನು ಪ್ರಚಾರ ಮಾಡಿದ್ದಾರೆ.
ಮುದ್ರಾ ಯೋಜನೆ, ಕೌಶಲ್ಯ ಅಭಿವೃದ್ಧಿ, ಸ್ವಚ್ಛ ಭಾರತ್, ಮೇಕ್ ಇನ್ ಇಂಡಿಯಾ, ಜನ್ ಧನ್ ಯೋಜನೆ, ಉಜ್ವಲ್ ಯೋಜನೆ, ಡಿಜಿಟಲ್ ಇಂಡಿಯಾ ಮತ್ತು ಇತರ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಒಂದು ವಾರದ ‘ಮೋದಿ ಯುಗ್ ಉತ್ಸವ’ವನ್ನು ಸಹ ಆಯೋಜಿಸಿದ್ದರು. ರಾಮದಾಸ್ ಮತ್ತು ಅವರ ಅನುಯಾಯಿಗಳು ಎಕ್ಸ್‌ಪೋವನ್ನು ಆಯೋಜಿಸಿದರು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರವು ಪ್ರಾರಂಭಿಸಿದ ಕಾರ್ಯಕ್ರಮಗಳಲ್ಲಿ ಪ್ರತಿ ಮನೆಯೂ ಸೇರುವಂತೆ ನೋಡಿಕೊಂಡರು.
ಇದು ಬಿಜೆಪಿಯ ರಾಷ್ಟ್ರ ನಾಯಕರ ಗಮನ ಸೆಳೆದುದ್ದಲ್ಲದೇ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸರ್ಕಾರದ ವರ್ಚಸ್ಸು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಹೆಚ್ಚಿನ ಯುವಕರು ನೋಂದಾಯಿಸಿಕೊಳ್ಳಲು ಮತ್ತು ಉದ್ಯೋಗ ಮಾರುಕಟ್ಟೆಗೆ ಹೊಂದಿಕೊಳ್ಳಲು ಐದು ವರ್ಷಗಳ ತರಬೇತಿಯನ್ನು ಪಡೆಯಲು ಸಹಾಯ ಮಾಡುವ ಸಲುವಾಗಿ ರಾಮದಾಸ್ ಮೈಸೂರಿನಲ್ಲಿ ಮೆಗಾ ಉದ್ಯೋಗ ಮೇಳ ಮತ್ತು ಕೌಶಲ್ಯ ಅಭಿವೃದ್ಧಿ ದಾಖಲಾತಿ ಕಾರ್ಯಕ್ರಮವನ್ನು ಸಹ ನಡೆಸಿದರು.
ಇದನ್ನೂ ಓದಿ: ಚಿಂತನಾ ಭೈಠಕ್ ನಲ್ಲಿ ಅಮಿತ್ ಶಾ?: 'ಸೋಮಾರಿ' ನಾಯಕರಿಗೆ ಗೇಟ್ ಪಾಸ್; ಸಂಕ್ರಾಂತಿ ನಂತರ ಸರ್ಕಾರದಲ್ಲಿ ಬದಲಾವಣೆ ಪರ್ವ!
ಸಚಿವ ಎಸ್ ಟಿ ಸೋಮಶೇಖರ್ ಸೇರಿದಂತೆ ಹಲಲು ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಈ ಮಾದರಿ ಅನುಸರಿಸಲು ಪ್ರಯತ್ನಿಸಿದ್ದಾರೆ. ಬಿಜೆಪಿಗೆ ಪಕ್ಷಾಂತರಗೊಂಡ ಬಹುಜನ ಸಮಾಜ ಪಕ್ಷದ ಶಾಸಕ ಎನ್ ಮಹೇಶ್ ಅವರು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಿದಾಗ ಸರ್ಕಾರವನ್ನು ಸಮರ್ಥಿಸಿಕೊಂಡ ನಂತರ ಗಮನ ಸೆಳೆದರು.
ಎಸ್‌ಸಿ(ಬಲ) ಎರಡು ಸಂಸದರು ಮತ್ತು ಶಾಸಕರನ್ನು ಹೊಂದಿದ್ದರೂ, ಪ್ರಾತಿನಿಧ್ಯದ ಕೊರತೆಯಿಂದ ಪ್ರತಿಪಕ್ಷಗಳಿಂದ ಟೀಕೆಗೆ ಒಳಗಾಗಿದೆ. ದಲಿತರ ಮತಗಳನ್ನು ಗೆಲ್ಲಲು ಮತ್ತು ಹಳೇ ಮೈಸೂರಿನಲ್ಲಿ ಕಾಂಗ್ರೆಸ್‌ನ ಪ್ರಭಾವವನ್ನು ಕುಗ್ಗಿಸಲು ಉತ್ಸುಕವಾಗಿರುವ ಬಿಜೆಪಿ, ಪುನರಾಚನೆಯಲ್ಲಿ ಅವರಿಗೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ 50 ಮತಗಳಿಗೆ ಸೀಮಿತಗೊಂಡಿದ್ದು, ಠೇವಣಿ ಕೈತಪ್ಪಿದ ಹಿನ್ನೆಲೆಯಲ್ಲಿ ಪರಿಷತ್ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನಕ್ಕಾಗಿ ಹೈಕಮಾಂಡ್ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿ ಆಕಾಂಕ್ಷಿಗಳು ಇದ್ದಾರೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ಪಕ್ಷವನ್ನು ತಮ್ಮೊಂದಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರೂ ಬಿಜೆಪಿ ಅಭ್ಯರ್ಥಿ ಆರ್.ರಘು ಸೋತಿರುವುದು ಟೀಕೆಗೆ ಗುರಿಯಾಗಿದೆ. ಅತಿಯಾದ ಆತ್ಮವಿಶ್ವಾಸದಿಂದ ಪಕ್ಷಕ್ಕೆ ನಷ್ಟ ಉಂಟಾಗಿದೆ ಇದೊಂದು ಎಚ್ಚರಿಕೆ ಗಂಟೆ ಎಂದು ಹೇಳಲಾಗಿದೆ.