ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದ ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಆರೋಗ್ಯ ಸಚಿವ ಸುಧಾಕರ್
ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆಯಿಂದ ರಾದ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ಪಾದಯಾತ್ರೆ ನಡೆಸಿದವರೇ ಇದಕ್ಕೆ ಕಾರಣ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ.
Published: 14th January 2022 07:39 AM | Last Updated: 14th January 2022 11:55 AM | A+A A-

ಆರೋಗ್ಯ ಸಚಿವ ಸುಧಾಕರ್
ಬೆಂಗಳೂರು: ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆಯಿಂದ ರಾದ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ಪಾದಯಾತ್ರೆ ನಡೆಸಿದವರೇ ಇದಕ್ಕೆ ಕಾರಣ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಪಾದಯಾತ್ರೆಯಲ್ಲಿದ್ದ ಮಲ್ಲಿಕಾರ್ಜುವ ಖರ್ಗೆ, ವೀರಪ್ಪ ಮೊಯ್ಲಿ, ಹೆಚ್.ಎಂ.ರೇವಣ್ಣ, ಸಿ.ಎಂ.ಇಬ್ರಾಹಿಂ ಸೇರಿದಂತೆ ಹಲವು ಕಾಂಗ್ರೆಸ್ ಹಿರಿಯ ನಾಯಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಂತೆಯೇ ಅನೇಕ ಅಮಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಎಷ್ಟು ಮಂದಿಗೆ ಸೋಂಕು ಬಂದಿದೆ ಎಂದು ಗೊತ್ತಿಲ್ಲ. ಪಾದಯಾತ್ರೆ ಸೋಂಕು ಹರಡಲು ಹಾದಿಯಾಗಿದ್ದು, ಪಾದಯಾತ್ರೆ ನಡೆಸಿದವರೇ ಸೋಂಕು ಪ್ರಕರಣಗಳ ಹೆಚ್ಚಳಕ್ಕೂ ಕಾರಣವಾಗಲಿದ್ದಾರೆಂದು ಹೇಳಿದರು.
ಇದನ್ನೂ ಓದಿ: ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯನವರ ಸಿಎಂ ಕನಸು ಭಗ್ನ: ಕೆ.ಎಸ್.ಈಶ್ವರಪ್ಪ
ಕಾಂಗ್ರೆಸ್'ನ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ. ಯಾವುದೇ ಲಾಠಿಚಾರ್ಚ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ. ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿ, ನೋಟಿಸ್ ಜಾರಿ ಮಾಡಿ ಕ್ರಮ ವಹಿಸಿದೆ. ಬಂಧಿಸುವುದು, ಲಾಠಿ ಚಾರ್ಜ್ ಮಾಡುವುದು ದೊಡ್ಡ ವಿಚಾರವಲ್ಲ. ಆದರೆ, ಇಂದಿನ ಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಉತ್ತಮವಾಗಿ ನಿರ್ವಹಣೆ ಮಾಡುವ ಮೂಲಕ ಮುತ್ಸದ್ಧಿತನ ಮೆರೆದಿದ್ದಾರೆಂದು ತಿಳಿಸಿದರು.
ಡಿಕೆ.ಶಿವಕುಮಾರ್ ಅವರು ಕೋವಿಡ್ ನಿರ್ವಹಣೆ ಬಗ್ಗೆ ಅನುಮಾನ ವ್ಯಕ್ತಪಡಿಸುವ ಮೂಲಕ ಸೋಂಕಿನ ನಿಯಂತ್ರಣದಲ್ಲಿದ್ದ ಅಧಿಕಾರಿಗಳಿಗೆ ಸ್ಫೂರ್ತಿ ಕಳೆಯುವ ಕೆಲಸ ಮಾಡಿದ್ದಾರೆಂದು ಇದೇ ವೇಳೆ ಬೇಸರ ವ್ಯಕ್ತಪಡಿಸಿದರು.
ಬಳಿಕ ಮೇಕೆದಾಟು ಯೋಜನೆ ಕುರಿತು ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀರಾವರಿ ಸಮಸ್ಯೆಗಳ ಬಗ್ಗೆ ಆಳವಾದ ತಿಳುವಳಿಕೆ ಮತ್ತು ಜ್ಞಾನವಿದೆ. “ರಾಜ್ಯಕ್ಕೆ ಅನುಕೂಲವಾಗಲು ಏನು ಮಾಡಬೇಕು ಎಂಬುದರ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿದೆ. ಇಂತಹ ಅಂತಾರಾಜ್ಯ ನೀರಿನ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರದ ಜೊತೆ ಕೈ ಜೋಡಿಸಬೇಕು. ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ರ್ಯಾಲಿಗಳನ್ನು ರದ್ದುಗೊಳಿಸಿತ್ತು. ಅದೇ ರೀತಿ ಕರ್ನಾಟಕದಲ್ಲಿಯೂ ಪಾದಯಾತ್ರೆ ರದ್ದು ಮಾಡಬೇಕಿತ್ತು ಎಂದಿದ್ದಾರೆ.
ಇದನ್ನೂ ಓದಿ: ಮೇಕೆದಾಟು ಯೋಜನೆಗಾಗಿ ಹೋರಾಟ ನಿಲ್ಲಿಸಲ್ಲ, ಇದು ತಾತ್ಕಾಲಿಕ ಸ್ಥಗಿತವಷ್ಟೆ: ಡಿ ಕೆ ಶಿವಕುಮಾರ್
ಮೇಕೆದಾಟು ಯೋಜನೆ ವಿಳಂಬವಾಗುತ್ತಿರುವ ಕಾನೂನು ಸಮಸ್ಯೆಗಳ ಕುರಿತು ಮಾತನಾಡಿ, ತಮಿಳುನಾಡು ಸುಪ್ರೀಂ ಕೋರ್ಟ್ನ ಮೊರೆ ಹೋಗಿದೆ. “ಕಾಂಗ್ರೆಸ್ಗೆ ನಿಜವಾಗಿಯೂ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೆ, ಪ್ರಕರಣವನ್ನು ಹಿಂಪಡೆಯಲು ತಮಿಳುನಾಡು ಸಿಎಂ ಜೊತೆ ಚರ್ಚಿಸಬಹುದಿತ್ತು. ಡಿಎಂಕೆ ಕಾಂಗ್ರೆಸ್ನ ಮಿತ್ರ ಪಕ್ಷವಾಗಿದೆ ಎಂದು ತಿಳಿಸಿದ್ದಾರೆ.