ನಾರಾಯಣ ಗುರುಗಳಿಗೆ ಎಸಗಿರುವ ಅಪಮಾನ.. 'ಹಿಂದೂ ಹೃದಯ ಸಾಮ್ರಾಟ' ಮೋದಿ ಗಮನಕ್ಕೆ ಬಂದಿಲ್ಲವೇ: ಸಿದ್ದರಾಮಯ್ಯ ಪ್ರಶ್ನೆ
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ದೇಶದ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Published: 16th January 2022 07:29 PM | Last Updated: 17th January 2022 01:32 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಸಮಾಜ ಸುಧಾರಕ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ನಾರಾಯಣ ಗುರುಗಳ ಚಿತ್ರದ ಸ್ತಬ್ಧಚಿತ್ರ ಕೇಂದ್ರ ತಿರಸ್ಕರಿಸಿದ್ದು ಅತ್ಯಂತ ಖಂಡನೀಯ: ಹೆಚ್.ಡಿ.ಕುಮಾರಸ್ವಾಮಿ
ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ.ಇದನ್ನು ಹೇಗೆ ಅರ್ಥೈಸಬೇಕು? ಈ ಅವಮಾನಕ್ಕೆ ಸಹಮತ ಇದೆಯೆಂದೇ? ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಗಳಲ್ಲಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಗಾನ ಕೋಗಿಲೆ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ: ವಿಸಿಟರ್ ಗಳ ಆಸ್ಪತ್ರೆ ಪ್ರವೇಶಕ್ಕೆ ನಿರ್ಬಂಧ
ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರ ಕೈಗೊಂಡೆ. ಇದರಿಂದಾಗಿ ಇಂದು ರಾಜ್ಯದ ಮೂಲೆ ಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ ಎಂಬ ಹೆಮ್ಮೆ ಮತ್ತು ತೃಪ್ತಿ ನನ್ನದು ಎಂದು ಅವರುಹೇಳಿದ್ದಾರೆ.
ಇದನ್ನೂ ಓದಿ: ಕೃಷಿ ಅಪಾಯಕಾರಿ ಭವಿಷ್ಯದತ್ತ ಸಾಗುತ್ತಿದೆ: ಅಮಿತ್ ಶಾ