ಮೇಕೆದಾಟು ರೀತಿಯಲ್ಲೇ ಮತ್ತೊಂದು ಪಾದಯಾತ್ರೆ ಸುಳಿವು ಕೊಟ್ಟ ಕಾಂಗ್ರೆಸ್ ನಾಯಕರು!
ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಅದರಲ್ಲೂ ಮಲಪ್ರಭಾ ಜಲಾನಯನ ಪ್ರದೇಶದ ರೈತರನ್ನು ಓಲೈಸುವ ಉದ್ದೇಶದಿಂದ ಮೇಕೆದಾಟು ಪಾದಯಾತ್ರೆಯಂತೆಯೇ ಮಹದಾಯಿ ಯೋಜನೆಗಾಗಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Published: 25th January 2022 09:05 AM | Last Updated: 25th January 2022 01:14 PM | A+A A-

ಸಿದ್ದರಾಮಯ್ಯ
ಹುಬ್ಬಳ್ಳಿ: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಅದರಲ್ಲೂ ಮಲಪ್ರಭಾ ಜಲಾನಯನ ಪ್ರದೇಶದ ರೈತರನ್ನು ಓಲೈಸುವ ಉದ್ದೇಶದಿಂದ ಮೇಕೆದಾಟು ಪಾದಯಾತ್ರೆಯಂತೆಯೇ ಮಹದಾಯಿ ಯೋಜನೆಗಾಗಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸೋಮವಾರ ಬಾದಾಮಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ಸುದ್ದಿಗಾರರೊಂದಿಗೆ ಮಹದಾಯಿ ಯೋಜನೆ ಕುರಿತು ಮಾತನಾಡಿದರು.
ಇದನ್ನೂ ಓದಿ: ಸಿಎಂ ಹುದ್ದೆ ಮೇಲೆ ಕಣ್ಣು: ಸೇಫ್ ಕ್ಷೇತ್ರಗಳಿಗಾಗಿ 'ತಲಾಶ್; ದೇವರಾಜ್ ಅರಸ್ ಕ್ಷೇತ್ರ ಹುಣಸೂರಿನಿಂದ ಸಿದ್ದರಾಮಯ್ಯ ಸ್ಪರ್ಧೆ!
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಮುಂದೂಡಲಾಗಿತ್ತು. ಮುಂಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಹದಾಯಿ, ಕೃಷ್ಣಾ ಹಾಗೂ 371 (ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ನಡೆಸಲು ಚಿಂತನೆಗಳು ನಡೆಯುತ್ತಿವೆ. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪಾದಯಾತ್ರೆ ನಡೆಸುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಗಳು ನಡೆಯುತ್ತಿದ್ದು, ಮೇಕೆದಾಟು ಪಾದಯಾತ್ರೆ ಪೂರ್ಣಗೊಂಡ ಬಳಿಕ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಮಹದಾಯಿ ಯೋಜನೆ ಅನುಷ್ಠಾನ ವಿಳಂಬ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, 'ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಯೋಜನೆ ಜಾರಿಗೊಳಿಸುವುದಾಗಿ ಹುಬ್ಬಳ್ಳಿಯಲ್ಲಿಯೇ ಭರವಸೆ ನೀಡಿದ್ದರು. ನಂತರ ಏನಾಯಿತು? ಈ ಭಾಗದ ಜನರಿಗೆ ನೀರು ಸಿಕ್ಕಿದೆಯೇ? ಎಂದು ಪ್ರಶ್ನಿಸಿದ್ದಾರೆ.