ಜಾರಕಿಹೊಳಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ: ಗೋವಿಂದ ಕಾರಜೋಳ
ರಮೇಶ್ ಜಾರಕಿಹೊಳಿಯವರಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಹೇಳಿದ್ದಾರೆ.
Published: 27th January 2022 07:33 AM | Last Updated: 27th January 2022 12:54 PM | A+A A-

ಗೋವಿಂದ ಕಾರಜೋಳ
ಬೆಳಗಾವಿ: ರಮೇಶ್ ಜಾರಕಿಹೊಳಿಯವರಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಹಿರಿಯ ಮತ್ತು ಅನುಭವಿ ರಾಜಕಾರಣಿ. ಅವರಿಗೆ ಕಾಂಗ್ರೆಸ್ನಲ್ಲಿ ಸ್ನೇಹಿತರಿದ್ದಾರೆ. ಅವರನ್ನು ಬಿಜೆಪಿಗೆ ಕರೆತರುವ ಶಕ್ತಿ ಅವರಿಗಿದೆ ಮತ್ತು ಇದನ್ನು ಅಲ್ಲಗಳೆಯುವಂತಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿರುವ ಶಾಸಕರು ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ಬಿಜೆಪಿಯ ಕೆಲವು ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಾಯಕರು ಭ್ರಮೆಯ ಜಗತ್ತಿನಲ್ಲಿ ಬದುಕುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿಯಿಂದ ಯಾವೊಬ್ಬ ಶಾಸಕರೂ ಪಕ್ಷ ತೊರೆದು ಕಾಂಗ್ರೆಸ್ ಸೇರುವುದಿಲ್ಲ. ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದ ಅವರು, ಬೆಳಗಾವಿಯಲ್ಲಿ ಬಿಜೆಪಿಯಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ಕ್ಕಿಂತ ಹೆಚ್ಚು ಸೀಟು ಪಡೆಯುವ ಸಾಮರ್ಥ್ಯವಿಲ್ಲ: ಎಚ್ ಡಿಕೆ ಲೇವಡಿ
ಬೆಳಗಾವಿ ಮಹಾನಗರ ಪಾಲಿಕೆಗೆ ನಾಲ್ಕು ತಿಂಗಳು ಕಳೆದರೂ ಇನ್ನೂ ಮೇಯರ್ ಮತ್ತು ಉಪಮೇಯರ್ ಏಕೆ ಆಯ್ಕೆಯಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೇಯರ್ ಸ್ಥಾನ ಮಹಿಳೆಯರಿಗೆ ಮತ್ತು ಉಪಮೇಯರ್ ಸ್ಥಾನವನ್ನು ಮೀಸಲಾತಿ ಪಟ್ಟಿಯಂತೆ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಿಡಲಾಗಿದೆ. ದಿನಾಂಕ ಘೋಷಣೆಯಾದ ನಂತರ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರ ಸೂಚನೆಯಂತೆ ಚುನಾವಣೆ ನಡೆಯಲಿದೆ ಎಂದಿದ್ದಾರೆ.