ಫೆಬ್ರವರಿ 14 ರಿಂದ ಜಂಟಿ ಅಧಿವೇಶನ: ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್, ಜೆಡಿಎಸ್ ಸಿದ್ಧತೆ
ಫೆಬ್ರವರಿ 14 ರಿಂದ ವಿಧಾನಸಭೆ ಮತ್ತು ಪರಿಷತ್ತಿನ ಜಂಟಿ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಹರಿಹಾಯಲು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಕಸರತ್ತು ಆರಂಭಿಸಿವೆ.
Published: 28th January 2022 12:30 PM | Last Updated: 28th January 2022 01:08 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಫೆಬ್ರವರಿ 14 ರಿಂದ ವಿಧಾನಸಭೆ ಮತ್ತು ಪರಿಷತ್ತಿನ ಜಂಟಿ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಹರಿಹಾಯಲು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಕಸರತ್ತು ಆರಂಭಿಸಿವೆ.
ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆ ಸೇರಿದಂತೆ ಹಲವು ಬಾಕಿ ಇರುವ ಮಸೂದೆಗಳನ್ನು ಅಂಗೀಕರಿಸಲು ಬಿಜೆಪಿ ಪ್ರಯತ್ನ ನಡೆಸಿದರೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ವಿವಿಧ ಸಮಸ್ಯೆಗಳನ್ನು ಹಿಡಿದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯೋಜನೆ ರೂಪಿಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿ, ಬೆಳಗಾವಿ ಅಧಿವೇಶನದ ವೇಳೆ ಕಾಂಗ್ರೆಸ್ ಕೈಗೆತ್ತಿಕೊಳ್ಳಲು ಬಯಸಿದ ಎಲ್ಲಾ ಸಮಸ್ಯೆಗಳನ್ನು ಈ ಬಾರಿಯ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುತ್ತದೆ, ಆದರೆ ಸಮಯದ ಕೊರತೆಯಿಂದಾಗಿ ಬೆಳಗಾವಿ ಅಧಿವೇಶನದಲ್ಲಿ ಆ ಸಮಸ್ಯೆಗಳ ಕುರಿತು ಧ್ವನಿ ಎತ್ತಲು ಸಾಧ್ಯವಾಗಲಿಲ್ಲ. ''ಜಂಟಿ ಅಧಿವೇಶನದಲ್ಲಿ ನಮಗೆ ಸಾಕಷ್ಟು ಅವಕಾಶಗಳು ಸಿಗಲಿವೆ. ಹೀಗಾಗಿ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಲು ಸಾಧ್ಯವಾಗದ ವಿಚಾರಗಳನ್ನು ಬೆಂಗಳೂರಿನಲ್ಲಿ ಪ್ರಸ್ತಾಪಿಸಲಾಗುವುದು. ಗುತ್ತಿಗೆದಾರರ ಸಂಘವು 40 ಪರ್ಸೆಂಟ್ ಸರ್ಕಾರ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ. ಸರ್ಕಾರ ಅಧಿಕಾರ ದುರುಪಯೋಗದ ಬಗ್ಗೆಯೂ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆಂದು ಹೇಳಿದ್ದಾರೆ.
ಇದನ್ನೂ ಓದಿ: ಫೆಬ್ರವರಿ 14 ರಿಂದ ಜಂಟಿ ಅಧಿವೇಶನ, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಗಂಭೀರವಾದ ನಿರುದ್ಯೋಗ ಸಮಸ್ಯೆಗಳಿವೆ. ಕೋವಿಡ್ ಪರಿಸ್ಥಿತಿ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ಸಚಿವರು ಹಾಗೂ ಅಧಿಕಾರಿಗಳ ನಡುವೆ ಸಹಕಾರಗಳಿಲ್ಲ. ಈ ಎಲ್ಲಾ ವಿಚಾರಗಳ ಕುರಿತಂತೆ ಪಕ್ಷವು ಶೀಘ್ರದಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಕನಾಜಿ, ''ಶೀಘ್ರದಲ್ಲೇ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮುಂಬರುವ ಅಧಿವೇಶನದಲ್ಲಿ ಯಾವ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದ ಎಂದು ತಿಳಿಸಿದ್ದಾರೆ.
ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಪ್ರಸ್ತುತ ರಾಜ್ಯದಲ್ಲಿ ಎದುರಾಗಿರುವ ಸಮಸ್ಯೆಗಳ ಕುರಿತು ಪಕ್ಷವು ನಿರ್ಧಾರಗಳ ಕೈಗೊಳ್ಳಲಿದೆ. ‘‘ಮತಾಂತರ ನಿಷೇಧ ಕಾಯ್ದೆ, ದೇವಸ್ಥಾನಗಳಿಗೆ ಸ್ವಾತಂತ್ರ್ಯ ಮತ್ತು ಮುಂಬರುವ ಚುನಾವಣೆಗಳ ಕುರಿತು ಚರ್ಚೆ ನಡೆಸಲಿದ್ದೇವೆಂದು ಹೇಳಿದ್ದಾರೆ.