ಮಾಧುಸ್ವಾಮಿ ತವರು ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದುಗೆ ಕೈ ಮುಖಂಡರ ಮನವಿ
2023ರ ವಿಧಾನಸಭೆ ಚುನಾವಣೆಯಲ್ಲಿ ಮಾಧುಸ್ವಾಮಿಯವರ ತವರು ತುಮಕೂರಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.
Published: 28th January 2022 08:27 AM | Last Updated: 28th January 2022 11:38 AM | A+A A-

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಕಾಂಗ್ರೆಸ್ ಮುಖಂಡರು.
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಾಧುಸ್ವಾಮಿಯವರ ತವರು ತುಮಕೂರಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.
ನಿನ್ನೆಯಷ್ಟೇ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಮತ್ತು ಚಿಕ್ಕನಾಯಕನಹಳ್ಳಿಯ ಕಾಂಗ್ರೆಸ್ ಮುಖಂಡರು ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದರು.
ಚಿಕ್ಕನಾಯಕನಹಳ್ಳಇ ಕ್ಷೇತ್ರದಲ್ಲಿ ಅಹಿಂತ ಮತದಾರರು ಹೆಚ್ಚಾಗಿದ್ದು, ಈ ಕ್ಷೇತ್ರದಿಂದ ಸ್ಪರ್ಧಿಸುವುದು ಅಹಿಂದ ನಾಯಕ ಸಿದ್ದರಾಮಯ್ಯನವರಿಗೆ ಸೇಫ್ ಆಗಿರುತ್ತದೆ. ಅಲ್ಲಿಂದ ಸ್ಪರ್ಧಿಸಿದರೆ, ಜಿಲ್ಲೆಯ ಎಲ್ಲಾ 11 ವಿಧಾನಸಭಾ ಸ್ಥಾನಗಳು, ಹಳೇ ಮೈಸೂರು ಭಾಗದ ಕೆಲವು ಭಾಗಗಳು ಮತ್ತು ಶಿವಮೊಗ್ಗ ಮತ್ತು ದಾವಣಗೆರೆಯ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಈ ಬಾರಿ ನಿಮ್ಮದು ಕ್ಷೇತ್ರಾಂತರವೋ, ಪಕ್ಷಾಂತರವೋ? ಮತ್ತೊಮ್ಮೆ ವಲಸೆಗೆ ವೇದಿಕೆ ಸೃಷ್ಟಿಸಿಕೊಳ್ಳುತ್ತಿದ್ದೀರಾ?
ಕ್ಷೇತ್ರದ ಸಮೀಕ್ಷೆ ನಡೆಸುವಂದೆ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿಕೊಂಡಿದ್ದೇವೆ. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಅವರು, ಪರಿಣಾಮಕಾರಿಯಾಗಿ ಪಕ್ಷವನ್ನು ಸಂಘಟಿಸುವಂತೆ ಮನವಿ ಮಾಡಿಕೊಂಡಿದ್ದಾರೆಂದು ವೈ ಸಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸಂಜೆ ವೇಳೆಗೆ ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಿದ ನಿಯೋಗ, ಚಿಕ್ಕನಾಯಕನಹಳ್ಳಿಯಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಡುವಂತೆ ಮನವಿ ಮಾಡಿದರು.
ಇದೇ ವೇಳೆ ತುಮಕೂರಿನಲ್ಲಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಸಿದ್ದರಾಮಯ್ಯನವರಿಗೆ ಕ್ಷೇತ್ರ ಆದರ್ಶವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಕೊರೋನಾ ಎಂದ ಇಬ್ರಾಹಿಂ: ಪಕ್ಷ ತೊರೆಯುತ್ತಿರುವವರಿಗೆ ಬೂಸ್ಟರ್ ಡೋಸ್ ಕೊಡ್ಬೇಕು; ಪ್ರಿಯಾಂಕ್
ವಯಸ್ಸು ಒಂದು ಕಾರಣ ಮತ್ತು ಸಿದ್ದರಾಮಯ್ಯ ದೂರದ ಬಾದಾಮಿ ಕ್ಷೇತ್ರಕ್ಕೆ ಆಗಾಗ್ಗೆ ಪ್ರಯಾಣಿಸಲು ಸಾಧ್ಯವಿಲ್ಲ. ಹೀಗಾಗಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ನಮ್ಮ ಅಪೇಕ್ಷೆಯಾಗಿದೆ ಎಂದು ತಿಳಿಸಿದರು. ಇದೇ ವೇಳೆ ಮಾಧುಸ್ವಾಮಿಯವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಈ ಬೆಳವಣಿಗೆ ಕುತೂಹಲ ಮೂಡಿಸಿದೆ.