ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ರಾಜ್ಯದ ನಾಯಕರು ಭಾಗಿ
ಆಂಧ್ರ ಪ್ರದೇಶದ ಹೈದರಾಬಾದ್ ನಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗುತ್ತಾರೆ.
Published: 02nd July 2022 10:06 AM | Last Updated: 02nd July 2022 01:21 PM | A+A A-

ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಹಾಕಿದ ಬ್ಯಾನರ್
ಹೈದರಾಬಾದ್: ಆಂಧ್ರ ಪ್ರದೇಶದ ಹೈದರಾಬಾದ್ ನಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗುತ್ತಾರೆ.
ಈಗಾಗಲೇ ಜೆ ಪಿ ನಡ್ಡಾ ಹೈದರಾಬಾದ್ ಗೆ ಬಂದಿದ್ದಾರೆ. ಇಂದು ಸಂಜೆ ವೇಳೆಗೆ ಪ್ರಧಾನಿ ಮೋದಿ ಹೈದರಾಬಾದ್ಗೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾರ್ಯಕಾರಿಣಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸುತ್ತಿದ್ದು ಇಂದು ಬೆಳಗ್ಗೆ ಹೈದರಾಬಾದ್ ಗೆ ತೆರಳಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಚರ್ಚೆಗೆ ಬರುವ ವಿಷಯಗಳು ಏನೇನು?
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ, ಸಿ.ಟಿ. ರವಿ, ನಳೀನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂಗಳಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಡಾ. ಅಶ್ವಥ್ ನಾರಾಯಣ ಮತ್ತು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಭಾಗಿಯಾಗುತ್ತಾರೆ.
Telangana | Visuals from Hyderabad where Prime Minister Narendra Modi will participate in BJP's two-day national executive meeting (July 2 & 3) starting today. pic.twitter.com/7I3ykEL1G9
— ANI (@ANI) July 2, 2022
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕುಟುಂಬಸ್ಥರೊಂದಿಗೆ ವಿದೇಶ ಪ್ರವಾಸದಲ್ಲಿರುವುದರಿಂದ ಅವರು ಕಾರ್ಯಕಾರಿಣಿಗೆ ಗೈರಾಗಿದ್ದಾರೆ.