'ನನಗೆ ವ್ಯಕ್ತಿಪೂಜೆ ಮುಖ್ಯವಲ್ಲ, ಪಕ್ಷಪೂಜೆ ಮುಖ್ಯ': ಪರೋಕ್ಷವಾಗಿ ಸಿದ್ದರಾಮೋತ್ಸವಕ್ಕೆ ಡಿಕೆ ಶಿವಕುಮಾರ್ ಟಾಂಗ್?

ನಮಗೆ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎನ್ನುವ ಮೂಲಕ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ.
ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್(ಸಂಗ್ರಹ ಚಿತ್ರ)
ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್(ಸಂಗ್ರಹ ಚಿತ್ರ)

ಉಡುಪಿ: ನಮಗೆ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎನ್ನುವ ಮೂಲಕ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಬಂದು ಸರ್ಕಾರ ರಚಿಸುವ ಆಸೆಯಲ್ಲಿ ಕಾಂಗ್ರೆಸ್ ಪಕ್ಷವಿದ್ದರೂ ಆಗಾಗ ನಾಯಕರ ಇಂತಹ ಮಾತುಗಳು ಪಕ್ಷದೊಳಗೆ ನಾಯಕರ ಮಧ್ಯೆ ಸರಿಯಿಲ್ಲ, ಹೊಂದಾಣಿಕೆ ಮತ್ತು ಒಗ್ಗಟ್ಟು ಇಲ್ಲವೇ ಎಂಬ ಮಾತುಗಳಿಗೆ ಪುಷ್ಟಿ ನೀಡುತ್ತಿವೆ.

ಇಂದು ಉಡುಪಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್ ನಾವು ವ್ಯಕ್ತಿ ಪೂಜೆಗೆ ಗೌರವ ನೀಡುವುದಿಲ್ಲ, ಪಕ್ಷ ಪೂಜೆ ಮಾಡುತ್ತೇವೆ ಎಂದು ಸಿದ್ದರಾಮೋತ್ಸವಕ್ಕೆ ಪರೋಕ್ಷ ಟಾಂಗ್ ಕೊಟ್ಟರು. 

ಸಾಮೂಹಿಕ ನಾಯಕತ್ವದಲ್ಲಿ ಮುಂಬರುವ ಚುನಾವಣೆಯನ್ನು ಎದುರಿಸುತ್ತೇವೆ. ನಮ್ಮ ಸರ್ಕಾರ ಬಂದಾಗ ನನ್ನನ್ನು ಮಂತ್ರಿ ಮಾಡಲಿಲ್ಲ, ಆಗಲೂ ನಾನೇನು ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ನನ್ನಂತ ನಿಷ್ಠಾವಂತ ಕಾರ್ಯಕರ್ತನನ್ನು ತೋರಿಸಿ, ಮಂತ್ರಿಗಿರಿ ಸಿಗದಿದ್ದಾಗಲೇ ನಾನು ಉಸಿರು ಎತ್ತಿರಲಿಲ್ಲ ಅಂದರೆ ಸಿದ್ದು ಮೇಲಿನ ಡಿಕೆಶಿ ಹಿಂದಿನ ದ್ವೇಷ ಇನ್ನೂ ಆರಿಲ್ವ ಎಂಬ ಪ್ರಶ್ನೆ ಮೂಡಿದೆ. ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ತಮ್ಮ ಮತ್ತು ಸಿದ್ದರಾಮಯ್ಯ ಸಂಧಾನ ನಡೆಯಿತೇ ಎಂಬ ಸುದ್ದಿಗಾರರ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಹೀಗೆ ಉತ್ತರಿಸಿದ್ದಾರೆ.

ಆಗಸ್ಟ್ 12ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಎಂಬ ಸಮಾವೇಶ ಆಯೋಜಿಸಲಾಗಿದೆ. ಸಿದ್ದರಾಮಯ್ಯ ಅವರ ಅನುಯಾಯಿಗಳು ದಾವಣಗೆರೆಯಲ್ಲಿ ಮೂರು ದಿನಗಳ ಕಾಲ ಈ ಸಮಾವೇಶ ಆಯೋಜಿಸಲಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಶೀತಲ ಸಮರ ನಡೆಯುತ್ತಿರುವಾಗಲೇ ಈ ಸಂಭ್ರಮಾಚರಣೆ ನಡೆಯಲಿದೆ. 

ಈಗಾಗಲೇ 2023ರ ವಿಧಾನಸಭೆ ಚುನಾವಣೆಗೆ ಮುನ್ನವೇ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ನಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿದೆ. ಈ ನಡುವೆ ಸಿದ್ದರಾಮೋತ್ಸವ ಸಮಾರಂಭಕ್ಕೆ ಡಿ.ಕೆ. ಶಿವಕುಮಾರ್ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com