ಪಿಎಸ್‌ಐ ನೇಮಕಾತಿ ಹಗರಣ: ವಿಜಯೇಂದ್ರ, ಅಶ್ವತ್ಥನಾರಾಯಣ ಪಾಲು ಇದೆ- ಸಿದ್ದರಾಮಯ್ಯ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಮತ್ತು ಐಟಿ-ಬಿಟಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಆರೋಪಿಸಿದ್ದಾರೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಮತ್ತು ಐಟಿ-ಬಿಟಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಆರೋಪಿಸಿದ್ದಾರೆ.

ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಒತ್ತಾಯಿಸಿದರು.

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಶ್ವಥ್ ನಾರಾಯಣ್ ಅವರ ಕೆಲವು ಅಭ್ಯರ್ಥಿಗಳು ಪಾಸಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ, ಈ ಹಗರಣದಲ್ಲಿ ವಿಜಯೇಂದ್ರ ಅವರ ಹೆಸರೂ ಕೇಳಿಬರುತ್ತಿದೆ, ಅವರ ವಿರುದ್ಧ ಏಕೆ ತನಿಖೆ ಅಥವಾ ಕ್ರಮ ಕೈಗೊಂಡಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. 

ಆಕಾಂಕ್ಷಿಗಳಿಂದ ಸಂಗ್ರಹಿಸಿದ ದೊಡ್ಡ ಮೊತ್ತದ ಹಣ ಎಲ್ಲಿ ಹೋಗಿದೆ, ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ಏಜೆನ್ಸಿಯ ಮುಂದೆ ವಿವರಗಳನ್ನು ಬಹಿರಂಗಪಡಿಸುತ್ತೇನೆ ಎಂದು ಅವರು ಕೇಳಿದರು. ಹಗರಣದ ದುಷ್ಕರ್ಮಿಗಳು ಪ್ರತಿ ಅಭ್ಯರ್ಥಿಗೆ 30 ರಿಂದ 80 ಲಕ್ಷ ರೂ.ವರೆಗೆ ವಸೂಲಿ ಮಾಡಿ ಹೆಚ್ಚಿನ ಅಂಕ ಗಳಿಸಲು ಅವರ ಒಎಂಆರ್ ಶೀಟ್‌ಗಳನ್ನು ತಿದ್ದಿದ್ದಾರೆ ಎಂದು ಆರೋಪಿಸಿದರು.

ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದಾಗ ಬೊಮ್ಮಾಯಿ ಮತ್ತು ಜ್ಞಾನೇಂದ್ರ ಇಬ್ಬರೂ ಹಗರಣ ನಡೆದಿಲ್ಲ ಎಂದು ಸಮರ್ಥಿಸಿಕೊಂಡರು. ಆದರೆ ಈಗ ಎಡಿಜಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಸರ್ಕಾರ ಜನರನ್ನು ದಾರಿ ತಪ್ಪಿಸಿದೆ. ಪ್ರತಿ ಘಟನೆಯಲ್ಲೂ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಬೊಮ್ಮಾಯಿ ಅಥವಾ ಜ್ಞಾನೇಂದ್ರ ಅವರ ಸ್ಥಾನಗಳಲ್ಲಿ ಮುಂದುವರಿಯುವ ಹಕ್ಕು ಇಲ್ಲ ಮತ್ತು ಕೆಳಗಿಳಿಯಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮಾರ್ಚ್‌ನಲ್ಲಿ ತನಿಖೆಗೆ ಒತ್ತಾಯಿಸಿತ್ತು. ಆದರೆ ಸರ್ಕಾರವು ಏಪ್ರಿಲ್‌ನಲ್ಲಿ ಮಾತ್ರ ಪ್ರಕರಣವನ್ನು ಸಿಐಡಿಗೆ ವಹಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸಚಿವರು ಮತ್ತು ಇತರ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವುದರಿಂದ ಸಿಐಡಿಯಿಂದ ಯಾವುದೇ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ನ್ಯಾಯಾಂಗ ತನಿಖೆಗೆ ನಾವು ಒತ್ತಾಯಿಸುತ್ತೇವೆ ಮತ್ತು ಹಾಲಿ ಹೈಕೋರ್ಟ್ ನ್ಯಾಯಾಧೀಶರು ಅದನ್ನು ಮೇಲ್ವಿಚಾರಣೆ ಮಾಡಬೇಕು. ನಾನು ಈ ಹಿಂದೆಯೇ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೆ ಎಂದು ತಿಳಿಸಿದರು. 

ಬಿಜೆಪಿ ಸರ್ಕಾರದಿಂದ ರಾಜ್ಯದ ಮಾನಹಾನಿ: ಡಿಕೆಎಸ್

ಡಿಕೆ ಶಿವಕುಮಾರ್ ಮಾತನಾಡಿ. ಎಡಿಜಿಪಿ ಅಮೃತ್ ಪಾಲ್ ಅವರನ್ನು ಬಂಧಿಸಿದ ಅರ್ಧ ಗಂಟೆಯೊಳಗೆ ಸೂಕ್ತ ವಿಚಾರಣೆ ನಡೆಸದೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿರುವುದು ನಾಚಿಕೆಗೇಡಿನ ಸಂಗತಿ, ನನ್ನನ್ನು ಬಂಧಿಸಿದಾಗ ಗಂಟೆಗಟ್ಟಲೆ ಕೂರಿಸಿದರು, ನಮ್ಮ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆಗಾಗಿ 50 ಗಂಟೆಗಳ ಕಾಲ ಕೂರಿಸಲಾಗಿತ್ತು.  ಇದು ಇಷ್ಟು ದೊಡ್ಡ ದಂಧೆಯಾಗಿದೆ ಮತ್ತು ನೀವು ಅವರನ್ನು ಕೇವಲ ಅರ್ಧ ಘಂಟೆಯವರೆಗೆ ಹೇಗೆ ವಿಚಾರಣೆ ಮಾಡುತ್ತೀರಿ? ತನಿಖೆ ಕೇವಲ ಹೆಸರಿಗೆ ಮಾತ್ರ. ಬಿಜೆಪಿ ಸರ್ಕಾರವು ರಾಜ್ಯದ ಮಾನಹಾನಿ ಮಾಡುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com