ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಇಬ್ಭಾಗ; ಕುಟುಂಬ ರಾಜಕೀಯದಲ್ಲಿ ಸಿಲುಕಿದ್ದ ಹಾಸನದಲ್ಲಿ ಸಂಘಟನೆ ಶಕಿ ಬೆಳೆಯುತ್ತಿದೆ: ಬಿಜೆಪಿ

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಹಾಸನ ಹೋಟೆಲ್ ಅಶೋಕದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿಗಾಗಿ ಒಳಜಗಳ ಇನ್ನಷ್ಟು ಹೆಚ್ಚಾಗಲಿದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಸಿದ್ರಾಮಣ್ಣನ ಗುಂಪು ಡಿಕೆಶಿ ಗುಂಪನ್ನು ಮತ್ತು ಡಿಕೆಶಿ ಗುಂಪು ಸಿದ್ರಾಮಣ್ಣನ ಅಭ್ಯರ್ಥಿಗಳನ್ನು ಸೋಲಿಸಲಿದ್ದಾರೆ. ಬಿಜೆಪಿ ವಿಕಾಸವಾದದ ಮೂಲಕ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

60 ವರ್ಷಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷವು ಯಾವ ರೈತನ ಖಾತೆಗೂ ಅದು ನೇರವಾಗಿ ಹಣ ಹಾಕಲಿಲ್ಲ. ಹಳ್ಳಿಯ ತಾಯಂದಿರಿಗೆ ಅನಿಲ ಭಾಗ್ಯ ಕೊಟ್ಟಿರಲಿಲ್ಲ. ಅವರ ಖಾತೆಗೆ ಹಣ ಹಾಕಿರಲಿಲ್ಲ. ಇವತ್ತು ಮನೆ ಮನೆಗೆ ಬ್ಯಾಂಕ್ ಖಾತೆ, ಶೌಚಾಲಯ ಸೌಲಭ್ಯ, ಮನೆ ಮನೆಗೆ ಗ್ಯಾಸ್ ಸಂಪರ್ಕ, ವಿದ್ಯುತ್ ಸಂಪರ್ಕ ಹಾಗೂ ಆಯುಷ್ಮಾನ್ ಯೋಜನೆ ಮೂಲಕ ಆರೋಗ್ಯ ಭಾಗ್ಯವನ್ನು ನರೇಂದ್ರ ಮೋದಿಯವರ ಸರಕಾರ ಕೊಟ್ಟಿದೆ. ಮನೆ ಮನೆಗೂ ಅದು ನೀರನ್ನು ನೀಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಹಿಂದುಳಿದವರನ್ನು ಮುಂದೆ ತರುವ ಕೆಲಸವನ್ನು ಮೋದಿ ಸರಕಾರ ಮಾಡಿದೆ ಎಂದ ಅವರು, ಹಿಂದಿನ ಕಾಂಗ್ರೆಸ್ ಸರಕಾರ ತುಷ್ಟೀಕರಣದ ರಾಜಕೀಯವನ್ನು ತನ್ನದಾಗಿಸಿಕೊಂಡಿತ್ತು ಎಂದು ವಿವರಿಸಿದರು. ತಿರಂಗಾ ಧ್ವಜಕ್ಕೆ ಜಗತ್ತೇ ಗೌರವ ನೀಡುವ ಕಾಲಘಟ್ಟ ಬಂದಿದೆ ಎಂದರು. ಪಠ್ಯಪುಸ್ತಕದಲ್ಲಿ ಯಾವುದೇ ಮಹಾನ್ ವ್ಯಕ್ತಿಯನ್ನೂ ಕಡೆಗಣಿಸಿಲ್ಲ. ಎಲ್ಲ ಸಮುದಾಯಕ್ಕೂ ಅದು ಗೌರವ ನೀಡಿದೆ ಎಂದು ತಿಳಿಸಿದರು.

ಕುಟುಂಬ ರಾಜಕೀಯ, ಜಾತಿ ರಾಜಕೀಯದಲ್ಲಿ ಬಹಳ ವರ್ಷಗಳಿಂದ ಸಿಲುಕಿದ್ದ ಹಾಸನ ಜಿಲ್ಲೆಯು ಇವತ್ತು ಅದ್ಭುತವಾಗಿ ನಮ್ಮ ಸಂಘಟನೆ ಶಕ್ತಿ ಬೆಳೆಯುತ್ತಿದೆ. ಕಮಲ ಇಲ್ಲಿ ಅರಳುತ್ತಿದೆ. ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ನಮ್ಮ ಶಕ್ತಿ ವೃದ್ಧಿಸಲು ಕೆಲಸ ಕಾರ್ಯಗಳು ನಡೆಯಲಿವೆ ಎಂದು ತಿಳಿಸಿದರು.

ಹಾಸನ ಜಿಲ್ಲೆಯಲ್ಲಿ 5 ಸ್ಥಾನ ಪಡೆಯಲಿದ್ದೇವೆ. ಮಂಡ್ಯ ಜಿಲ್ಲೆಯಲ್ಲೂ ನಮ್ಮ ಶಕ್ತಿ ವೃದ್ಧಿ ಆಗಲಿದೆ. ಹಳೆ ಮೈಸೂರು ಭಾಗದಲ್ಲೂ ಪಕ್ಷದ ಬಲ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿ.ಬಿ.ಶಿವಪ್ಪ ಅವರಿಂದ ಪಕ್ಷಕ್ಕೆ ಕೊಡುಗೆ ದೊಡ್ಡದು ಎಂದು ನೆನಪಿಸಿದರು. ಹಾಸನ ಜಿಲ್ಲೆ ಬಿಜೆಪಿಗೆ ಶಕ್ತಿ ತುಂಬಿದೆ. ಈ ಜಿಲ್ಲೆ ಒಂದು ಕುಟುಂಬಕ್ಕೆ ಸೀಮಿತವಲ್ಲ. ಇದು ರಾಷ್ಟ್ರೀಯ ವಿಚಾರಧಾರೆಗಳಿಗೆ ಶಕ್ತಿ ತುಂಬುತ್ತ ಬಂದಿದೆ. ಅದಕ್ಕಾಗಿ ಇಲ್ಲಿಂದಲೇ ನಮ್ಮ ವಿಜಯಯಾತ್ರೆ ಪ್ರಾರಂಭಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com