ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ, ಇನ್ನು ಶಿವಕುಮಾರ್ ಸಿಎಂ ಆಗಲು ಬಿಡುತ್ತಾರೆಯೇ: ಬೊಮ್ಮಾಯಿ

ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಅವರ ಪಕ್ಷದವರೇ ಬಿಡುತ್ತಿಲ್ಲ, ಇನ್ನು ಮುಖ್ಯಮಂತ್ರಿಯಾಗಲು ಬಿಡುತ್ತಾರೆಯೇ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಾನೊಂದು ತೀರ ನೀನೊಂದು ತೀರ ಎನ್ನುವ ರೀತಿಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. 
ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿ
ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿ

ಮೈಸೂರು: ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಅವರ ಪಕ್ಷದವರೇ ಬಿಡುತ್ತಿಲ್ಲ, ಇನ್ನು ಮುಖ್ಯಮಂತ್ರಿಯಾಗಲು ಬಿಡುತ್ತಾರೆಯೇ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಾನೊಂದು ತೀರ ನೀನೊಂದು ತೀರ ಎನ್ನುವ ರೀತಿಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. 

ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಹಳ ವರ್ಷಗಳಿಂದ ಸಿಎಂ ಆಗಬೇಕೆಂದು ಡಿ ಕೆ ಶಿವಕುಮಾರ್ ಒದ್ದಾಡುತ್ತಿದ್ದಾರೆ. ಸಿಎಂ ಆಗಬೇಕೆಂದು ಅವರ ಬಹಳ ವರ್ಷದ ಕನಸಾಗಿದೆ ಎಂದರು.

ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ಕಣಿವೆ ವ್ಯಾಪ್ತಿಯ ಜಲಾಶಯಗಳು ಬಹುತೇಕ ಭರ್ತಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ  ಕಬಿನಿ ಹಾಗೂ ಕೆ.ಆರ್.ಎಸ್. ಜಲಾಶಯಗಳಿಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿ ಬಾಗಿನ ಅರ್ಪಿಸಿದರು. 

ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಇದು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿದೆ. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮಶೇಖರ್, ಶಾಸಕರಾದ ಅನಿಲ್ ಚಿಕ್ಕಮಾದು, ಡಾ.ಹರ್ಷವರ್ಧನ್​ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com