ಬೆಂಗಳೂರು: ಫ್ರೀಡಂ ಪಾರ್ಕ್‌ನಿಂದ ರಾಜಭವನದವರೆಗೆ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇಡಿ ತನಿಖೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಘಟಕದಿಂದ ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪೊಲೀಸರ ಬ್ಯಾರಿಕೇಡ್ ಗೂ ಬಗ್ಗದ ಕಾಂಗ್ರೆಸ್ ಮುಖಂಡರು, ಬ್ಯಾರಿಕೇಡ್ ನೆಗೆದು ಮೆರವಣಿಗೆಯಲ್ಲಿ ಸಾಗಿದರು.
Published: 21st July 2022 03:27 PM | Last Updated: 21st July 2022 05:12 PM | A+A A-

ರಾಜ್ಯ ಕಾಂಗ್ರೆಸ್ ಮುಖಂಡರು
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇಡಿ ತನಿಖೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಘಟಕದಿಂದ ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪೊಲೀಸರ ಬ್ಯಾರಿಕೇಡ್ ಗೂ ಬಗ್ಗದ ಕಾಂಗ್ರೆಸ್ ಮುಖಂಡರು, ಬ್ಯಾರಿಕೇಡ್ ಮೇಲೆ ಹತ್ತಿ ಮೆರವಣಿಗೆಯಲ್ಲಿ ಸಾಗಿದರು.
ಇದನ್ನೂ ಓದಿ: ಸೋನಿಯಾ ಇಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆ: ಚಿದಂಬರಂ, ಮಾಕೆನ್ ಬಂಧನ, ಕೈ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಪ್ರಯೋಗ
ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ ಮಾತನಾಡಿದರು.
ಪ್ರತಿಪಕ್ಷದ ನಾಯಕರನ್ನು ಹೆದರಿಸುವ ಬಿಜೆಪಿ ಸರ್ಕಾರದ ದ್ವೇಷದ ಹಾಗೂ ಕುತಂತ್ರ ರಾಜಕಾರಣದ ವಿರುದ್ಧ ಫ್ರೀಂಡಂ ಪಾರ್ಕ್‌ನಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆಯ ಕಾರ್ಯಕ್ರಮದ ಅಂಗವಾಗಿ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ಭಾಗವಹಿಸಿ ಮಾತನಾಡಿದರು. pic.twitter.com/LGQHih2Aih
— Karnataka Congress (@INCKarnataka) July 21, 2022
ತನಿಖೆ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸು ನಾಶಕ್ಕೆ ಬಿಜೆಪಿ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ತನಿಖೆಗೆ ಹೆದರಿ ಓಡಿ ಹೋಗುವವರಲ್ಲ, ಐಟಿ, ಇಡಿ, ಸಿಬಿಐ ಏನೇ ಬರಲಿ ಹೆದರುವುದಿಲ್ಲ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಪಕ್ಷದ ನಾಯಕರನ್ನು ಹೆದರಿಸುವ ಬಿಜೆಪಿ ಸರ್ಕಾರದ ದ್ವೇಷದ ಹಾಗೂ ಕುತಂತ್ರ ರಾಜಕಾರಣಕ್ಕೆ ಬಗ್ಗಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.