ಗಾಂಧಿ ಕುಟುಂಬದ ಬೆಂಬಲಕ್ಕೆ ನಿಲ್ಲದಿದ್ದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತೆ: ರಮೇಶ್ ಕುಮಾರ್ 'ಋಣ ಸಂದಾಯ' ಹೇಳಿಕೆ ಬಿಜೆಪಿ ನಾಯಕರ ಅಸ್ತ್ರ!

ಗಾಂಧಿ ಕುಟುಂಬದ ಹೆಸರಿನಲ್ಲಿ ಮೂರ್ನಾಲ್ಕು ತಲೆಮಾರು ಕೂತು ತಿನ್ನುವಷ್ಟು ಆಸ್ತಿ ಮಾಡಿಕೊಂಡಿರುವ ನಾವೆಲ್ಲರೂ ಈಗ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಬೆಂಬಲಕ್ಕೆ ನಿಂತು, ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ ಎಂದು ಕಾಂಗ್ರೆಸ್‌ ಶಾಸಕ ಕೆ.ಆರ್‌. ರಮೇಶ್‌ ಕುಮಾರ್‌  ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.
ರಮೇಶ್ ಕುಮಾರ್ ಹೇಳಿಕೆಗೆ ಬಿಜೆಪಿ ನಾಯಕರ ಪ್ರತಿಕ್ರಿಯೆ
ರಮೇಶ್ ಕುಮಾರ್ ಹೇಳಿಕೆಗೆ ಬಿಜೆಪಿ ನಾಯಕರ ಪ್ರತಿಕ್ರಿಯೆ

ಬೆಂಗಳೂರು: ಗಾಂಧಿ ಕುಟುಂಬದ ಹೆಸರಿನಲ್ಲಿ ಮೂರ್ನಾಲ್ಕು ತಲೆಮಾರು ಕೂತು ತಿನ್ನುವಷ್ಟು ಆಸ್ತಿ ಮಾಡಿಕೊಂಡಿರುವ ನಾವೆಲ್ಲರೂ ಈಗ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಬೆಂಬಲಕ್ಕೆ ನಿಂತು, ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ  ಎಂದು ಕಾಂಗ್ರೆಸ್‌ ಶಾಸಕ ಕೆ.ಆರ್‌. ರಮೇಶ್‌ ಕುಮಾರ್‌ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಮಾತು ಗುರುವಾರ ಇಡೀ ದಿನ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಆಗಿದ್ದಲ್ಲದೆ, ಬಿಜೆಪಿ ನಾಯಕರಿಂದ ಲೇವಡಿಗೆ ಒಳಗಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ರಮೇಶ್‌ ಕುಮಾರ್‌, ಋಣ ಸಂದಾಯದ ವಿಚಾರ ಪ್ರಸ್ತಾಪಿಸಿದ್ದನ್ನು ಬಿಜೆಪಿ ನಾಯಕರು  ಕಟುಕಿದ್ದಾರೆ.

ಮೂರು- ನಾಲ್ಕು ತಲೆಮಾರು ಆಗುವಷ್ಟು ಆಸ್ತಿ ನಾವು ಮಾಡಿದೇವೆ ಎಂಬ ಹೇಳಿ ರಮೇಶ್ ಕುಮಾರ್ ಅವರು ಕಾಂಗ್ರೆಸ್ 60 ವರ್ಷದ ನಿಜ ಬಣ್ಣವನ್ನು ಹೊರಹಾಕಿದ್ದಾರೆ. ಯಾವಾಗಲೂ ರಮೇಶ್ ಕುಮಾರ್ ಸತ್ಯ ಹೇಳುತ್ತಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಇಡಿ ವಿಚಾರಣೆಗೆ ರಮೇಶ್ ಕುಮಾರ್ ಸಾಕ್ಷಿ ಕೊಟ್ಟಿದ್ದಾರೆ. ನಮ್ಮ ಮೇಲೆ ಕಾಂಗ್ರೆಸ್ ಅವ್ರು 40% ಕಮಿಷನ್ ಆರೋಪ ಮಾಡಿದ್ದರು. ಇವಾಗ ಅವರ ಪಕ್ಷದವರೇ 3-4 ತಲೆಮಾರು ಆಗುವಷ್ಟು ಆಸ್ತಿ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ಕಂದಾಯ ಸಚಿವ ಆರ್ .ಅಶೋಕ್ ಹೇಳಿದರು. ಕಾಂಗ್ರೆಸ್ ಅವರು. 70 ವರ್ಷ ಕಾಂಗ್ರೆಸ್ ದೇಶವನ್ನು ಲೂಟಿ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ಮೂರ್ನಾಲ್ಕು ತಲೆಮಾರುಗಳಿಗೆ ಸಾಕಾಗುವಷ್ಟು ಹಣ ಮಾಡಿದ್ದೇವೆ ಎಂದು ಒಪ್ಪಿಕೊಂಡಿರುವುದಕ್ಕೆ ತುಂಬಾ ಸಂತೋಷವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಮೇಶ್ ಕುಮಾರ್ ವಿರುದ್ಧ ವ್ಯಂಗ್ಯವಾಡಿದರು.

ಗಾಂಧಿ ಕುಟುಂಬದ ಹೆಸರಿನಲ್ಲಿ ಮೂರು–ನಾಲ್ಕು ತಲೆಮಾರು ಕೂತು ತಿನ್ನುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ. ಇದಕ್ಕೆ ನಾವು ಸೋನಿಯಾಗಾಂಧಿ ಅವರಿಗೆ ಋಣಿಯಾಗಬೇಕು ಎಂದು ಕಾಂಗ್ರೆಸ್‌ ನಾಯಕ ರಮೇಶ್ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್‌ನ ಎಲ್ಲ ನಾಯಕರನ್ನೂ ಇ.ಡಿ ತನಿಖೆಗೆ ಒಳಪಡಿಸಬೇಕು ಎಂದು ಇಂಧನ ಸಚಿವ ವಿ.ಸುನೀಲ್‌ಕುಮಾರ್‌ ಒತ್ತಾಯಿಸಿದ್ದಾರೆ. ರಮೇಶ್‌ಕುಮಾರ್ ತಮ್ಮ ಸಹಜವಾದ ಭಾಷಣದ ವೇಳೆ ಬಹಳ ದಿನಗಳ ಬಳಿಕ ಸತ್ಯ ಹೇಳಿದ್ದಾರೆ.

‘ಭಾರತ್ ತೇರೆ ತುಕಡೆ ಹೊಂಗೇ’ ಎಂದು ಭಾರತವನ್ನು ತುಂಡರಿಸುವವರಿಗೆ ಬೆಂಬಲ ಸೂಚಿಸಿದ್ದ ಐಎನ್ ಸಿ ಕಾಂಗ್ರೆಸ್ ಪಕ್ಷ ಭಾರತ್ ಜೋಡೊ ಯಾತ್ರೆಗೆ ಕರೆಕಟ್ಟಿರುವುದೇ ಹಾಸ್ಯಾಸ್ಪದವಾಗಿದೆ. ಒಂದು ಕೈಯಲ್ಲಿ ದೇಶದ್ರೋಹಿಗಳು ಎಂಬ ಮಗುವನ್ನು ಚೂಟಿ,ಈಗ ಭಾರತ್ ಜೋಡೊ ಎಂಬ ತೊಟ್ಟಿಲನ್ನು ಕಾಂಗ್ರೆಸ್ ಪಕ್ಷ ತೂಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ ಪಕ್ಷದ 60 ವರ್ಷಗಳ ‘ಲೂಟ್‌ ಇಂಡಿಯಾ’ ಕಾರ್ಯಕ್ರಮವನ್ನು ಅತ್ಯಂತ ಸೊಗಸಾಗಿ ವರ್ಣಿಸಿದ ಮೇಧಾವಿ ನಾಯಕರಿಗೆ ಅಭಿನಂದನೆಗಳು  ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ಅವರು ಕಾಂಗ್ರೆಸ್‌ ಶಾಸಕ ರಮೇಶ್‌ಕುಮಾರ್ ಅವರನ್ನು ಉದ್ದೇಶಿಸಿ ವ್ಯಂಗ್ಯವಾಗಿ ಟ್ವೀಟ್‌ ಮಾಡಿದ್ದಾರೆ.  ನಿಮ್ಮ ಪಕ್ಷದ ಹಿರಿಯ ನಾಯಕರೇ ಇಷ್ಟು ಪ್ರಾಮಾಣಿಕವಾಗಿ ಬ್ರಹ್ಮಾಂಡ ಭ್ರಷ್ಟಾಚಾರವನ್ನೇ ಒಪ್ಪಿಕೊಂಡ ಮೇಲೆ ಯಾವ ಮುಖ ಇಟ್ಟುಕೊಂಡು ಜನರ ಬಳಿ ಮತ ಕೇಳುತ್ತೀರಿ  ಎಂದು ಅವರು ಕಾಂಗ್ರೆಸ್‌ ಪಕ್ಷವನ್ನು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com