ಯಡಿಯೂರಪ್ಪ ಬೆನ್ನಲ್ಲೇ ಚುನಾವಣೆ ಬಿಜೆಪಿಯ ಮತ್ತೊಬ್ಬ ನಾಯಕ ನಿವೃತ್ತಿ ಘೋಷಣೆ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಇದೀಗ ಮತ್ತೋರ್ವ ಬಿಜೆಪಿ ನಾಯಕ ಚುನಾವಣೆ ನಿವೃತ್ತಿ ಘೋಷಿಸಿದ್ದಾರೆ.
ಸಂಸದ ಬಸವರಾಜು
ಸಂಸದ ಬಸವರಾಜು

ತುಮಕೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಇದೀಗ ಮತ್ತೋರ್ವ ಬಿಜೆಪಿ ನಾಯಕ ಚುನಾವಣೆ ನಿವೃತ್ತಿ ಘೋಷಿಸಿದ್ದಾರೆ.

ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಅವರ ಈ ನಿರ್ಧಾರದ ಬೆನ್ನಲ್ಲೇ ಅವರ ಕಟ್ಟಾ ಬೆಂಬಲಿಗರೊಬ್ಬರು, ತುಮಕೂರು ಬಿಜೆಪಿ ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು ಕೂಡ ಅದನ್ನೇ ಅನುಸರಿಸಿದ್ದಾರೆ. 

ತುಮಕೂರು ಬಿಜೆಪಿ ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು ಅವರು ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಘೋಷಿಸಿದ್ದಾರೆ.

ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅವರು ಇಂದು ಹೇಳಿದ್ದಾರೆ. ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ ಅವರು ಸ್ಪರ್ಧಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿಲ್ಲ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೆ ಎಂದು ಬಸವರಾಜ್ ಹೇಳಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರನ್ನು ಸೋಲಿಸಿದ ಬಿಜೆಪಿಯ ಜಿ.ಎಸ್.ಬಸವರಾಜು ಸೋಲಿಸಿದ್ದರು.

ಇನ್ನು ಬಸವರಾಜು ಅವರ ಪುತ್ರ ಜಿಬಿ ಜ್ಯೋತಿಗಣೇಶ್ ತುಮಕೂರು ನಗರದ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ. ಮೂಲತಃ ಕಾಂಗ್ರೆಸ್‌ನವರೇ ಆದ ತಂದೆ-ಮಗ ಬಿಎಸ್‌ವೈ ಅವರದೇ ರಾಜಕೀಯ ಪಕ್ಷವಾದ ಕೆಜೆಪಿ ಆರಂಭಿಸಿದಾಗ ಅವರನ್ನು ಹಿಂಬಾಲಿಸಿ ನಂತರ ಬಿಜೆಪಿ ಸೇರಿದ್ದರು. 2023ರ ವಿಧಾನಸಭೆ ಚುನಾವಣೆಗೂ ಮುನ್ನ ಅವರು ಕಾಂಗ್ರೆಸ್‌ ಸೇರಬಹುದು ಎಂಬ ವದಂತಿಗಳು ಹಬ್ಬಿದ್ದವು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com