
ಯಡಿಯೂರಪ್ಪ
ಬೆಂಗಳೂರು: ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಶಿಕಾರಿಪುರದಲ್ಲಿ ನನ್ನ ಬದಲಿಗೆ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಸಲಹೆ ನೀಡಿದೆ ಅಷ್ಟೇ. ಅಂತಿಮವಾಗಿ ತೀರ್ಮಾನ ಹೈಕಮಾಂಡ್ ಮಾಡುತ್ತೆ ಎಂದು ಯಡಿಯೂರಪ್ಪ ಸಮಜಾಯಿಷಿ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರೂ ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಗೊಂದಲ ಸ್ಪಷ್ಟಪಡಿಸಲು ಹೇಳಿಕೆ ನೀಡಿದರು.
ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಒಂದು ವರ್ಷ ಪೂರೈಸುವ ಮುನ್ನವೇ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಜುಲೈ 28 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ರ್ಯಾಲಿಯಲ್ಲಿ 2023 ರ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರವನ್ನು ಅನಾವರಣಗೊಳಿಸುವುದಾಗಿ ಘೋಷಿಸಿದರು.
ಇದನ್ನೂ ಓದಿ: ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ: ಸಿಎಂ ಬೊಮ್ಮಾಯಿ, ಆರ್. ಅಶೋಕ್
ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗಲಿದ್ದಾರೆ ಎಂಬ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ನಮ್ಮ ಶಕ್ತಿ, ಮಾರ್ಗದರ್ಶಿ ಮತ್ತು ರಾಜ್ಯದ ಅತ್ಯಂತ ಜನಪ್ರಿಯ ನಾಯಕ ಎಂದು ಬೊಮ್ಮಾಯಿ ಹೇಳಿದರು. ಬೊಮ್ಮಾಯಿ ಅವರು ಕಂದಾಯ ಸಚಿವ ಆರ್.ಅಶೋಕ ಅವರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಎಸ್‌ವೈ ಅವರ ಹೇಳಿಕೆ ಕೇವಲ ಸಲಹೆಯಾಗಿದೆ ಎಂದು ಸಮರ್ಥನೆ ನೀಡಿದ್ದಾರೆ.