ಉರಿಯುವ ಮನೆಯಲ್ಲಿ ಮತಕ್ಕಾಗಿ ಕೋಮು'ಗಳʼ ಇರಿಯುವುದಾ ಸಾಧನೆ? ಕಂಡೋರ ಮಕ್ಕಳ ಸಾವಿಗೆ ನೂಕಿ ಮತ ಫಸಲು ತೆಗೆಯುವ ನರಹಂತಕ ರಾಜಕಾರಣ!
ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರ್ಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ?
Published: 28th July 2022 11:48 AM | Last Updated: 28th July 2022 12:55 PM | A+A A-

ಪ್ರವೀಣ್ ನೆಟ್ಟಾರು
ಬೆಂಗಳೂರು: ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ, ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ..
ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ. 8/8#ಕರಾವಳಿ_ಕೆರಳಿದೆ— H D Kumaraswamy (@hd_kumaraswamy) July 28, 2022
ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರ್ಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ..
— H D Kumaraswamy (@hd_kumaraswamy) July 28, 2022
ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ. 8/8#ಕರಾವಳಿ_ಕೆರಳಿದೆ
ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ? ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಸ್ವಂತ ಬಲದ ಮೇಲೆ 'ಗದ್ದುಗೆ' ಏರುವ ತವಕ: ಉತ್ತರ 'ದಂಡಯಾತ್ರೆ'ಗೆ ಜೆಡಿಎಸ್ ಸಜ್ಜು!
ಏನು ಸಾಧನೆ ಅಂತ ಸರಕಾರ ಜನರಿಗೆ ಹೇಳುತ್ತದೆ? 40% ಕಮಿಷನ್ , ಕೋವಿಡ್ ಹೆಸರಿನಲ್ಲಿ ಕೊಳ್ಳೆ, ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್ ಕೋಟಾ, ಪಿಎಸ್ಐ ನೇಮಕದಲ್ಲಿ ಕಾಸಿನಾಟ ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು?
ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ.. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ.. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.