ರಾಹುಲ್ ಗಾಂಧಿ ರಾಜ್ಯ ಪ್ರವಾಸ: ಸಿದ್ದು-ಡಿಕೆಶಿ ಗದ್ದುಗೆ ಗುದ್ದಾಟಕ್ಕೆ ಬ್ರೇಕ್; ಕೈ ನಾಯಕರಿಗೆ ಕ್ಲಾಸ್, ಒಗ್ಗಟ್ಟಿನ ಮಂತ್ರ ಪಠಣೆ?

ಕಾಂಗ್ರೆಸ್ ಪಕ್ಷದಲ್ಲಿ ಜೋರಾಗಿರುವ ಸಿಎಂ ಸ್ಥಾನ ಗುದ್ದಾಟಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಬ್ರೇಕ್ ಹಾಕುವ ಸಾಧ್ಯತೆಯಿದೆ. ರಾಜ್ಯ ಪ್ರವಾಸ ಕೈಗೊಳ್ಳುವ ವೇಳೆ ಪಕ್ಷದ ನಾಯಕರಿಗೆ ಈ ಬಗ್ಗೆ ರಾಹುಲ್ ಎಚ್ಚರಿಕೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜೋರಾಗಿರುವ ಸಿಎಂ ಸ್ಥಾನ ಗುದ್ದಾಟಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಬ್ರೇಕ್ ಹಾಕುವ ಸಾಧ್ಯತೆಯಿದೆ. ರಾಜ್ಯ ಪ್ರವಾಸ ಕೈಗೊಳ್ಳುವ ವೇಳೆ ಪಕ್ಷದ ನಾಯಕರಿಗೆ ಈ ಬಗ್ಗೆ ರಾಹುಲ್ ಎಚ್ಚರಿಕೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಆಗಸ್ಟ್ 2ರಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಸಂಸದ ರಾಹುಲ್ ಗಾಂಧಿ, ದೆಹಲಿಯಿಂದ ನೇರವಾಗಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಅಂದು ಹುಬ್ಬಳ್ಳಿಯಲ್ಲೇ ರಾತ್ರಿ ವಾಸ್ತವ್ಯ ಹೂಡಲಿರುವ ರಾಹುಲ್ ಗಾಂಧಿ ಮರುದಿನ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಅದಕ್ಕೂ ಮೊದಲು ಆ.2ರಂದು ರಾತ್ರಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಲಿದ್ದು ಪಕ್ಷದ ಹಿರಿಯ ನಾಯಕರ ಜೊತೆ ರಾಜ್ಯ ರಾಜಕೀಯ ವಿದ್ಯಮಾನಗಳ ಮಹತ್ವದ ಚರ್ಚೆ ನಡೆಸಲಿದ್ದಾರೆ.  ಚುನಾವಣೆಯಲ್ಲಿ ಗೆಲ್ಲಲು ರಣತಂತ್ರದ ರೂಪಿಸಲಿದ್ದಾರೆ. ಜೊತೆಗೆ ಪಕ್ಷದಲ್ಲಿ ಸಿಎಂ ಗಾದಿ ಸಂಬಂಧ ನಾಯಕರಲ್ಲಿ ಉದ್ಭವಿಸಿರುವ ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಎನ್ನಲಾಗಿದೆ.

ಮತ್ತೊಮ್ಮೆ ಒಗ್ಗಟ್ಟಿನ ಪಾಠ ಮಾಡಲಿರುವ ರಾಹುಲ್ ಗಾಂಧಿ ಸಿಎಂ ಗಾದಿ ಬಗ್ಗೆ ಬಹಿರಂಗ ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆ ಮನವರಿಕೆ ಮಾಡಿಕೊಡಲಿದ್ದಾರೆ. ನಾಯಕರೆಲ್ಲರಿಗೂ ಮನವರಿಕೆ ಮಾಡಿಕೊಡುವ ಮೂಲಕ ಗೊಂದಲಕ್ಕೆ ಅವಕಾಶ ನೀಡದಂತೆ ಸ್ಪಷ್ಟ ಎಚ್ಚರಿಕೆ ನೀಡುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com