ಸಿದ್ದರಾಮಯ್ಯ 75ನೇ ವರ್ಷದ ಹುಟ್ಟುಹಬ್ಬ: ಮುಂದಿನ ಮುಖ್ಯಮಂತ್ರಿಯನ್ನಾಗಿ ಬಿಂಬಿಸಲು 'ಸಿದ್ದರಾಮೋತ್ಸವ' ಆಚರಣೆ!
ಆಗಸ್ಟ್ 12ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಎಂಬ ಸಮಾವೇಶ ಆಯೋಜಿಸಲಾಗುತ್ತಿದೆ.
Published: 04th June 2022 01:34 PM | Last Updated: 04th June 2022 02:21 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಆಗಸ್ಟ್ 12ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಎಂಬ ಸಮಾವೇಶ ಆಯೋಜಿಸಲಾಗುತ್ತಿದೆ.
ಅಲ್ಪ ಸಂಖ್ಯಾತ ಸಮುದಾಯಗಳನ್ನು ಒಗ್ಗೂಡಿಸಿ ಅಹಿಂದ ಸಮಾವೇಶ ನಡೆಸಿದ್ದ ಸಿದ್ದರಾಮಯ್ಯ, ಗಣಿ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದ್ದರು.
ಸಿದ್ದರಾಮಯ್ಯ ಅವರ ಅನುಯಾಯಿಗಳು ದಾವಣಗೆರೆಯಲ್ಲಿ ಮೂರು ದಿನಗಳ ಸಮಾವೇಶ ಆಯೋಜಿಸಲಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಶೀತಲ ಸಮರ ನಡೆಯುತ್ತಿರುವಾಗಲೇ ಈ ಸಂಭ್ರಮಾಚರಣೆ ನಡೆದಿದೆ. 2023ರ ವಿಧಾನಸಭೆ ಚುನಾವಣೆಗೆ ಮುನ್ನವೇ ಸಿಎಂ ಪಟ್ಟಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದೆ.
ಕಾಂಗ್ರೆಸ್ ಸೇರುವ ಮುನ್ನ ಸಿದ್ದರಾಮಯ್ಯ ಅವರು 2005-06ರಲ್ಲಿ ಅಹಿಂದ ಸಮಾವೇಶ ನಡೆಸಿದ್ದರು. ಈ ಚಳವಳಿಯು ಅವರ ರಾಜಕೀಯ ಜೀವನದಲ್ಲಿ ಪ್ರಮುಖ ಪಾತ್ರ ವಹಿಸಿತು ಮತ್ತು ನಂತರ ಅವರು 2013 ರಲ್ಲಿ ಪೂರ್ಣ ಬಹುಮತದೊಂದಿಗೆ ಮುಖ್ಯಮಂತ್ರಿಯಾದರು.
ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಕೆಲವೇ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯ ಒಬ್ಬರು. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು. ಈ ಸಮಾರಂಭದಲ್ಲಿ ಸಿದ್ದರಾಮಯ್ಯನವರ ಸಾಧನೆಗಳ ಬಗ್ಗೆ ಹಲವಾರು ತಜ್ಞರು ಮಾತನಾಡಲಿದ್ದಾರೆ' ಎಂದು ಹೆಸರು ಹೇಳಲು ಇಚ್ಚಿಸಿದ ಮುಖಂಡರೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: 'ರೈತ ಮುಖಂಡ ನಂಜುಂಡಸ್ವಾಮಿ ಬದುಕಿದ್ದರೆ ಹಸಿರು ಶಾಲಿನಲ್ಲೇ ಮಜಾವಾದಿ ಸಿದ್ದರಾಮಯ್ಯಗೆ ಕಪಾಳಮೋಕ್ಷ ಮಾಡಿರುತ್ತಿದ್ದರು'
ಅವರ ಸಾಧನೆಗಳನ್ನು ಕುರಿತ ಪುಸ್ತಕ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಸಮಾರಂಭದಲ್ಲಿ ಕೇಂದ್ರದ ಹಲವು ನಾಯಕರು ಭಾಗವಹಿಸುವ ಸಾಧ್ಯತೆಯಿದೆ. ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನೂ ಆಹ್ವಾನಿಸಲು ಸಂಘಟಕರು ಮುಂದಾಗಿದ್ದಾರೆ. ಎರಡು ವರ್ಷಗಳ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಜನ್ಮದಿನಾಚರಣೆಯಲ್ಲಿ ಕಾಂಗ್ರೆಸ್ನ ಏಕೈಕ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದರು.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವ ಪ್ರಯತ್ನ ಇದಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಇದು ಶಿವಕುಮಾರ್ ಅವರಿಗೆ ಸರಿ ಹೋಗದಿರಬಹುದು. ಪಕ್ಷದ ವೇದಿಕೆಗಳಲ್ಲಿ ಈ ಬಗ್ಗೆ ಔಪಚಾರಿಕವಾಗಿ ಚರ್ಚೆಯಾಗಿಲ್ಲ ಎಂದು ಸಿದ್ದರಾಮಯ್ಯ ಅವರ ನಿಕಟವರ್ತಿ ಎಚ್ಸಿ ಮಹದೇವಪ್ಪ ಹೇಳಿದ್ದಾರೆ.
ಹುಟ್ಟು ಹಬ್ಬ ಆಚರಣೆಗೆ ಇನ್ನೂ ಸಮಯಾವಕಾಶವಿರುವುದರಿಂದ ಯಾವುದೇ ಹೆಚ್ಚಿನ ಮಾಹಿತಿಯನ್ನು ಬಹಿರಂಗಗೊಳಿಸಲಿಲ್ಲ. ಸದ್ಯ ವಿಧಾನ ಪರಿಷತ್ ಮತ್ತು ರಾಜ್ಯ ಸಭೆ ಚುನಾವಣೆಯಲ್ಲಿ ಮಗ್ನರಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದ ಸಿದ್ದರಾಮಯ್ಯ ಅವರು ಬಾಗಲಕೋಟೆಯ ಬಾದಾಮಿಯಿಂದ ಗೆದ್ದಿದ್ದರು.