'ಪ್ರತಾಪ್ ಸಿಂಹ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು; ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ನಾನು ಸೋಲುತ್ತಿರಲಿಲ್ಲ'
ಪ್ರತಾಪ್ ಸಿಂಹ ಒಬ್ಬ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published: 08th June 2022 08:39 AM | Last Updated: 08th June 2022 01:03 PM | A+A A-

ಪ್ರತಾಪ್ ಸಿಂಹ ಮತ್ತು ಸಿದ್ದರಾಮಯ್ಯ
ಮೈಸೂರು: ಪ್ರತಾಪ್ ಸಿಂಹ ಒಬ್ಬ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಲಾ ಪ್ರಾಕ್ಟೀಸ್ ಮಾಡಿದ್ದೇವೆ. ಅವನಿಗೇನಾಗಿದೆ ಬಾಯಿಗೆ ಬಂದಂಗೆ ಮಾತನಾಡುತ್ತಾನೆ. ಮಹಾರಾಜರನ್ನು ಬಿಟ್ಟರೇ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಕೊಚ್ಚಿಕೊಳ್ಳುತ್ತಾನೆ. ಈ ಎಂಪಿ ಕಾಲದಲ್ಲಿ ಏನೂ ಕೆಲಸವಾಗಿಲ್ಲ ಎಂದು ಆರೋಪಿಸಿದರು.
2014ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ, ನಾನು ಸೋಲುತ್ತಿರಲಿಲ್ಲ. ರಾಜ್ಯದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದೀರಾ, ನಿಮಗೆ ನಾಚಿಕೆ ಆಗುವುದಿಲ್ಲವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವಕೀಲರ ಬಗ್ಗೆ ಅಪಾರ ಗೌರವವಿದೆ, ಕಾಂಗ್ರೆಸ್ಸಿಗರ ಅಪ ಪ್ರಚಾರಕ್ಕೆ ಕಿವಿಗೊಡಬೇಡಿ: ಪ್ರತಾಪ್ ಸಿಂಹ ಸ್ಪಷ್ಟನೆ
ಕರ್ನಾಟಕದ ಶಾಂತಿಯನ್ನು ಮಸೀದಿಯಲ್ಲಿ ಶಿವಲಿಂಗ ಹುಡುಕುವ ಮೂಲಕ ಕದಡಲಾಗುತ್ತಿದೆ. ಬಿಜೆಪಿ ವಕ್ತಾರರು ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ನಾಯಕರು ಇದಕ್ಕೆ ಕಡಿವಾಣ ಹಾಕಬೇಕು. ಈ ಬಗ್ಗೆ ಆರ್ಎಸ್ಎಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹೇಳಬೇಕು. ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದನ್ನು ನಿಲ್ಲಿಸಿ ಅಂತಾ ಹೇಳಬೇಕು ಹರಿಹಾಯ್ದಿದ್ದಾರೆ.
ಭಾಗವತ್ ಅವರು ಕುಣಿಯೋದನ್ನು ನಿಲ್ಲಿಸಿ ಎಂದರೂ ನೀವು ಏಕೆ ಕುಣಿಯುತ್ತಿದೀರಾ? ಬೆಂಕಿ ಹಚ್ಚುವುದನ್ನು ನಿಲ್ಲಿಸಿ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಆದರೂ ನೀವು ಬೆಂಕಿ ಹಚ್ಚುವ ಕೆಲಸ ನಿಲ್ಲಿಸುತ್ತಿಲ್ಲ. ಸದ್ಯಕ್ಕೆ ರಾಜ್ಯದ ಮಾನ ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲಿ ಆಡಳಿತದಲ್ಲಿರುವುದು ಬಿಜೆಪಿ ಸರ್ಕಾರವೇ ಹೊರತು, ಆರ್.ಎಸ್.ಎಸ್. ಸರ್ಕಾರವಲ್ಲ. ನಾವು 17 ಮಂದಿ ಬಿಜೆಪಿ ಸರ್ಕಾರ ಬೆಂಬಲಿಸಿ ಬಂದವರು. ನಾವು ಆರ್.ಎಸ್.ಎಸ್. ಬೆಂಬಲಿಸಿ ಬಂದವರಲ್ಲ ಎಂದು ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.