ಜೆಡಿಎಸ್ ಜಾತ್ಯಾತೀತವಾಗಿದ್ದರೆ ಕಾಂಗ್ರೆಸ್‌ಗೆ ಮತ ಹಾಕಬೇಕು: ಎಂ.ಬಿ.ಪಾಟೀಲ್

ಜೆಡಿಎಸ್ ಜಾತ್ಯತೀತ ಮೌಲ್ಯಗಳಿಗೆ ಬದ್ಧವಾಗಿದ್ದರೆ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಉಸ್ತುವಾರಿ ಎಂ.ಬಿ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.

Published: 10th June 2022 07:35 AM  |   Last Updated: 10th June 2022 12:55 PM   |  A+A-


MB patil

ಎಂ.ಬಿ.ಪಾಟೀಲ್

The New Indian Express

ಮೈಸೂರು/ಹಾಸನ: ಜೆಡಿಎಸ್ ಜಾತ್ಯತೀತ ಮೌಲ್ಯಗಳಿಗೆ ಬದ್ಧವಾಗಿದ್ದರೆ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಉಸ್ತುವಾರಿ ಎಂ.ಬಿ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷ ತನ್ನ ಶಕ್ತಿಹೆಚ್ಚಿಸಿಕೊಳ್ಳಲು ಸಮಯ ಬಂದಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿದ ತ್ಯಾಗವನ್ನು ಜೆಡಿಎಸ್ ಪರಿಗಣಿಸಿ ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಜಾತ್ಯತೀತತೆಯನ್ನು ಸಾಬೀತುಪಡಿಸುವ ಸಮಯ ಬಂದಿದೆ ಎಂದು ತಿಳಿಸಿದರು. ಇದೇ ವೇಳೆ ಮುಂಬರುವ ಎಂಎಲ್‌ಸಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ ಅವರು, ಬಿಜೆಪಿಯ ದುರಾಡಳಿತದಿಂದ ಬೇಸತ್ತಿರುವ ಪದವೀಧರರು ಮತ್ತು ಶಿಕ್ಷಕರು  ಆ ಪಕ್ಷದಿಂದ ದೂರ ಸರಿದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದರು. 

ಕೃಷ್ಣ ಬೈರೇಗೌಡ ಅವರು ಮಾತನಾಡಿ, ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕೊಡುಗೆಯನ್ನು ಪರಿಗಣಿಸಿ ನಮ್ಮ ಪಕ್ಷವು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಬೆಂಬಲಿಸಿತ್ತು. ಕಾಂಗ್ರೆಸ್ ಮಾಡಿದ ತ್ಯಾಗವನ್ನು ಈಗ ಅವರು ಪರಿಗಣಿಸಬೇಕಾಗಿದೆ. ನಮ್ಮ ಅಭ್ಯರ್ಥಿ ಮನ್ಸೂರ್ ಖಾನ್ ದೇವೇಗೌಡರನ್ನು ಭೇಟಿ ಮಾಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ' ಎಂದು ಬೈರೇಗೌಡ ಹೇಳಿದರು.

ಇದನ್ನೂ ಓದಿ: ಕುಮಾರಸ್ವಾಮಿ ನಿದ್ದೆಗೆಡಿಸಿದ ಸಿದ್ದರಾಮಯ್ಯ 'ಆತ್ಮಸಾಕ್ಷಿ ಮತಗಳು': ಕಾಂಗ್ರೆಸ್ ನಾಯಕರಿಗೆ ಎಚ್ ಡಿಕೆ ಓಪನ್ ಆಫರ್!

ಅಧಿಕಾರ ಉಳಿಸಿಕೊಳ್ಳಲು ಯತ್ನ
ಇದೇ ವೇಳೆ ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ ಎಂ.ಬಿ.ಪಾಟೀಲ್ ಅವರು, ಬಿಜೆಪಿ ನಾಯಕರು ಹುಸಿ ಭರವಸೆ ನೀಡಿ ಅಧಿಕಾರ ಉಳಿಸಿಕೊಳ್ಳಲು ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ದೇಶ ದೊಡ್ಡ ನಿರುದ್ಯೋಗ ಸಮಸ್ಯೆ ಎದುರಿಸುವಂತೆ ಮಾಡಿದ್ದಾರೆ. ವಿವಿಧ ಹಂತಗಳಲ್ಲಿ ವಿವಿಧ ಕ್ಷೇತ್ರಗಳಿಗೆ ನೀಡಿದ ಭರವಸೆಗಳು ಇನ್ನೂ ಈಡೇರಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದಿರುವ ಶೇ.40 ಕಮಿಷನ್ ಆರೋಪ ಕುರಿತು ಮಾತನಾಡಿದ ಅವರು, ಎಲ್ಲಾ ಇಲಾಖೆಗಳಲ್ಲಿ ನಡೆಯುತ್ತಿರುವ ವ್ಯಾಪಕವಾಗಿರುವ ಭ್ರಷ್ಟಾಚಾರವನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ತಿಳಿಸಿದರು. 

ಬಳಿಕ ಸರಕಾರ ಪಠ್ಯಪುಸ್ತಕ ಪರಿಷ್ಕರಣೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರ ನೂತನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರಚಿಸಿ ಪಠ್ಯಕ್ರಮವನ್ನು ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು.


Stay up to date on all the latest ರಾಜಕೀಯ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp