ಪ್ರತಿಭಟನೆ ವೇಳೆ ದೆಹಲಿ ಪೊಲೀಸರಿಂದ ಹಲ್ಲೆ: ಇದು ಪ್ರಜಾಪ್ರಭುತ್ವವೇ; ಕಾಂಗ್ರೆಸ್ ನಾಯಕರ ಪ್ರಶ್ನೆ

ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಗೆ ತೆರಳುತ್ತಿದ್ದ ವೇಳೆ ಪಕ್ಷದ ನಾಯಕರನ್ನು ಬಂಧಿಸಿರುವ ದೆಹಲಿ ಪೊಲೀಸರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ನವದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಡಿಕೆ ಸುರೇಶ್ ಮತ್ತು ಇತರರನ್ನು ಬಂಧಿಸಲಾಯಿತು.
ಮಂಗಳವಾರ ನವದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಡಿಕೆ ಸುರೇಶ್ ಮತ್ತು ಇತರರನ್ನು ಬಂಧಿಸಲಾಯಿತು.

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಗೆ ತೆರಳುತ್ತಿದ್ದ ವೇಳೆ ಪಕ್ಷದ ನಾಯಕರನ್ನು ಬಂಧಿಸಿರುವ ದೆಹಲಿ ಪೊಲೀಸರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮವನ್ನು ವಿರೋಧಿಸಿದಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ದೆಹಲಿ ಪೊಲೀಸರು ಡಿಕೆ ಸುರೇಶ್, ದಿನೇಶ್ ಗುಂಡೂ ರಾವ್ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವವೋ ಅಥವಾ ಪೊಲೀಸ್ ರಾಜ್ಯವೋ ನಮಗೆ ಗೊತ್ತಿಲ್ಲ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

"ನಾವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೊಂದಿದ್ದೇವೆಯೇ?...ಪೊಲೀಸ್ ಠಾಣೆಗೆ ಕರೆದೊಯ್ದ ಪಕ್ಷದ ನಾಯಕರನ್ನು ಪೊಲೀಸರು ಕೆಟ್ಟದಾಗಿ ನಡೆಸಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

ಇದೇ ವೇಳೆ ಇಡಿ ತನಿಖೆಯನ್ನು ರಾಜಕೀಯ ಸೇಡಿನ ಕ್ರಮ ಎಂದು ಬಣ್ಣಿಸಿರುವ ಅವರು, ಸರ್ಕಾರದ ರಾಜಕೀಯ ಪ್ರೇರಿತ ಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಪಕ್ಷದ ನಾಯಕರ ವಿರುದ್ಧ ಇಡಿ ಕ್ರಮಕ್ಕೆ ದೇಶಾದ್ಯಂತ ಪಕ್ಷದ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. “ಇದು ಪ್ರಜಾಪ್ರಭುತ್ವವೇ? ಪಕ್ಷದ ಕಚೇರಿಗೆ ಹೋಗುವ ನಾಯಕರನ್ನು ಬಂಧಿಸಿರುವುದು ಅನ್ಯಾಯವಲ್ಲವೇ? ಎಂದು ಪ್ರಶ್ನಿಸಿದರು.

ಇಂತಹ ಕೀಳುಮಟ್ಟದ ರಾಜಕಾರಣವನ್ನು ನಾವು ಹಿಂದೆಂದೂ ನೋಡಿಲ್ಲ, ಪರಿಸ್ಥಿತಿ ತುರ್ತು ಪರಿಸ್ಥಿತಿಗಿಂತ ಕೆಟ್ಟದಾಗಿದೆ. ನಮ್ಮ ನಾಯಕರು ಯಾವುದೇ ತಪ್ಪು ಮಾಡಿಲ್ಲ ಮತ್ತು ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ರಾಹುಲ್ ಗಾಂಧಿಯನ್ನು 10 ಗಂಟೆಗಳ ಕಾಲ ಪ್ರಶ್ನಿಸುವ ಅಗತ್ಯವೇನಿದೆ? ಅವರನ್ನೇಕೆ 10 ದಿನಗಳ ಕಾಲ ಪ್ರಶ್ನಿಸಲಾಯಿತು? ಅವರ ತಪ್ಪಾದರೂ ಏನಿದೆ? ಎಂದು ಪ್ರಶ್ನಿಸಿದರು.

ಇದೇ ವಳೆ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿದವರು ತಿಹಾರ್ ಜೈಲಿಗೆ ಸೇರುತ್ತಾರೆ ಎಂಬ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಂತ್ ನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾರಾಯಣ್ ದೇಶದ ಅತ್ಯಂತ ಭ್ರಷ್ಟ ಶಿಕ್ಷಣ ಸಚಿವರಾಗಿದ್ದು, ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಾಗುತ್ತದೆ ಎಂದಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com