ಸಿದ್ದರಾಮಯ್ಯ ವಿರುದ್ಧ ದೂರು: ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಜಾತಿನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.
ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ
ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಜಾತಿನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಪರಿಷತ್ ಸದಸ್ಯ ಛಲವಾಧಿ ನಾರಾಯಣಸ್ವಾಮಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದಾರೆ. ಹೈಗೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ, ನನ್ನ ವಿರುದ್ಧ ಸಿದ್ದರಾಮಯ್ಯ ಅವರು ಜಾತಿ ನಿಂದನೆ ಮಾಡಿದ್ದಾರೆ. ಸದಾ ನೀವು ಅಸ್ಪೃಶ್ಯರು, ಗುಲಾಮರು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಹೀಗಾಗಿ ಎಸ್ ಸಿ ಎಸ್ ಟಿ ಕಾಯ್ದೆ ಅನ್ವಯ ಅವರ ವಿರುದ್ಧ ಜಾತಿನಿಂದನೆ ದೂರು ಸಲ್ಲಿಸಿದ್ದೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಪೊಲೀಸರು ಕೂಡಲೇ ಎಫ್ ಐ ಆರ್ ದಾಖಲಿಸಬೇಕು ಮತ್ತು ಸಿದ್ದರಾಮಯ್ಯ ಅವರನ್ನ ಕೂಡಲೇ ಬಂಧಿಸಬೇಕು. ಸಿದ್ದರಾಮಯ್ಯನವರನ್ನ ಬಂಧಿಸದಿದ್ರೆ ನಾನು ಪ್ರತಿಭಟನೆ ಮಾಡುತ್ತೇನೆ. ಕೂಡಲೇ ಅಟ್ರಾಸಿಟಿ ಕೇಸ್ ಅಡಿ ದೂರು ದಾಖಲಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಇತ್ತೀಚಿಗೆ ಸಿದ್ದರಾಮಯ್ಯನವರ ನಿವಾಸಕ್ಕೆ ಚಡ್ಡಿ ಹೊತ್ತುಕೊಂಡು ಹೋಗಿ ಪ್ರತಿಭಟನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ ಛಲವಾದಿ ನಾರಾಯಣ ಸ್ವಾಮಿಯವರೇ, ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ ಎಂದು ಟ್ವೀಟ್ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com