ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಲು ಏಜೆನ್ಸಿಗಳ ದುರ್ಬಳಕೆ: ಡಿಕೆ ಶಿವಕುಮಾರ್
ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರು ಗುರಿಯಾಗಿಸಲು ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
Published: 17th June 2022 12:03 PM | Last Updated: 17th June 2022 01:05 PM | A+A A-

ಡಿಕೆ ಶಿವಕುಮಾರ್
ಬೆಂಗಳೂರು: ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರು ಗುರಿಯಾಗಿಸಲು ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಗುರುವಾರ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ತಡೆಯಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಮಧ್ಯಸ್ಥಿಕೆಗೆ ಒತ್ತಾಯಿಸಿದರು.
ರಾಹುಲ್ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್ ಜೋಡೋ ಯಾತ್ರೆ ಘೋಷಿಸಿದ ನಂತರ, ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದೆ ಎಂದು ಅವರು ಆರೋಪಿಸಿದರು.
ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ಗೆ ಆಗಿರುವ ಅನ್ಯಾಯ ಮತ್ತು ಕಿರುಕುಳದ ವಿರುದ್ಧ ಪಕ್ಷವು ನಿರಂತರ ಹೋರಾಟ ನಡೆಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ತಾವು ತನಿಖೆಗೆ ವಿರೋಧಿಗಳಲ್ಲ, ಹಿರಿಯ ನಾಯಕರ ಹೆಸರು ಕೆಡಿಸುವ ಉದ್ದೇಶದಿಂದ ಹಿರಿಯ ನಾಯಕರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಷಡ್ಯಂತ್ರವನ್ನು ಖಂಡಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಇಂದು ಕೂಡಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.