ಹೈಕಮಾಂಡ್ ಬುಲಾವ್: ಸಿಎಂ ಬೊಮ್ಮಾಯಿ ನಾಳೆ ದೆಹಲಿಗೆ? ಮತ್ತೆ ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ
ಸಿಎಂ ಬಸವರಾಜ ಬೊಮ್ಮಾಯಿಗೆ ದೆಹಲಿಯಿಂದ ಹೈಕಮಾಂಡ್ ಬುಲಾವ್ ಬಂದಿದೆ. ನಾಳೆಯೇ ದೆಹಲಿಗೆ ಬರುವಂತೆ ನಾಯಕರು ಸೂಚನೆ ನೀಡಿದ್ದು ಮತ್ತೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಹಾಗೂ ಕರ್ನಾಟಕದಲ್ಲಿ ಸರ್ಕಾರ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು, ಬದಲಾವಣೆಗಳು ಆಗಬಹುದು ಎಂಬ ಕುತೂಹಲ ಗರಿಗೆದರಿದೆ.
Published: 22nd June 2022 11:14 AM | Last Updated: 22nd June 2022 12:13 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಗೆ ದೆಹಲಿಯಿಂದ ಹೈಕಮಾಂಡ್ ಬುಲಾವ್ ಬಂದಿದೆ. ನಾಳೆಯೇ ದೆಹಲಿಗೆ ಬರುವಂತೆ ನಾಯಕರು ಸೂಚನೆ ನೀಡಿದ್ದು ಮತ್ತೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಹಾಗೂ ಕರ್ನಾಟಕದಲ್ಲಿ ಸರ್ಕಾರ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು, ಬದಲಾವಣೆಗಳು ಆಗಬಹುದು ಎಂಬ ಕುತೂಹಲ ಗರಿಗೆದರಿದೆ.
ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗುವ ಸಾಧ್ಯತೆಗಳು ಬಹುತೇಕವಾಗಿದೆ ಎಂದು ಮೂಲಗಳು ತಿಳಿಸಿವೆ.ಸಿಎಂ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು ಅಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ: ಜೂನ್ 15ರ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ: ಹೊಸ ಮುಖಗಳಿಗೆ ಸ್ಥಾನ ಸಿಗುವ ಸಾಧ್ಯತೆ
ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಎರಡು ದಿನಗಳ ಭೇಟಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರು ಮೊನ್ನೆ ಬೆಂಗಳೂರಿನಲ್ಲಿ ಹಾಗೂ ನಿನ್ನೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಅವರು ಬಂದು ಹೋಗಿದ್ದು ರಾಜ್ಯ ಬಿಜೆಪಿಗೆ ಶಕ್ತಿ ತುಂಬುತ್ತದೆ, ಕೇಸರಿ ಪಡೆಯಲ್ಲಿ ಬದಲಾವಣೆಯಾಗುತ್ತದೆ ಎಂದು ದಟ್ಟ ಚರ್ಚೆಗಳು ನಡೆದಿದ್ದವು.