'ಮಹಾ' ರಾಜಕೀಯ ಬಿಕ್ಕಟ್ಟು, ರಾಷ್ಟ್ರಪತಿ ಚುನಾವಣೆ: ವರಿಷ್ಠರ ಭೇಟಿ ಸಾಧ್ಯವಾಗದೆ ಸಿಎಂ ಬೊಮ್ಮಾಯಿ ವಾಪಸ್

ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ದೆಹಲಿ: ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ನವದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿ ಸಹಿ ಹಾಕಲು ಪಕ್ಷದ ಎಲ್ಲ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಆ ಕೆಲಸಕ್ಕೆ ಬಂದಿದ್ದೇನೆ. ಜತೆಗೆ ಯಾವುದೇ ಕೇಂದ್ರ ಸಚಿವರನ್ನು ಭೇಟಿ ಮಾಡುವುದಿಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಾಗ ನಾನೇ ಅದನ್ನು ಅಧಿಕೃತವಾಗಿ ಹೇಳುತ್ತೇನೆ ಎಂದರು ಕೇಂದ್ರದ ಬಿಜೆಪಿ ನಾಯಕರು ಮಹಾರಾಷ್ಟ್ರ ವಿದ್ಯಮಾನಗಳ ಬಗ್ಗೆ ಬ್ಯುಸಿ ಇರುವ ಕಾರಣ ಯಾರನ್ನೂ ಭೇಟಿ ಮಾಡಲಿಲ್ಲ ಎಂದು ತಿಳಿದು ಬಂದಿದೆ.

'ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಈ ರೀತಿ ಮಾಧ್ಯಮಗಳಲ್ಲಿ ಸುದ್ದಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ' ಎಂದರು.  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದರು. "ಪಕ್ಷದ ಹೈಕಮಾಂಡ್ ರಾಷ್ಟ್ರಪತಿ ಚುನಾವಣೆಯಲ್ಲಿ ನಿರತವಾಗಿರುವುದರಿಂದ  ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಇದು ಒಂದು ಸಂದರ್ಭವಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com