ಡಿಸೆಂಬರ್ ನಲ್ಲಿ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವೆ: ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್

ಶಾಸಕ ಸ್ಥಾನಕ್ಕೆ ಡಿಸೆಂಬರ್ ನಂತರ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಗುರುವಾರ ಹೇಳಿದರು.
ಎಸ್ ಆರ್ ಶ್ರೀನಿವಾಸ್
ಎಸ್ ಆರ್ ಶ್ರೀನಿವಾಸ್

ತುಮಕೂರು: ಶಾಸಕ ಸ್ಥಾನಕ್ಕೆ ಡಿಸೆಂಬರ್ ನಂತರ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಸದ್ಯಕ್ಕೆ ರಾಜೀನಾಮೆ ಬಗ್ಗೆ ಯೋಚಿಸಿಲ್ಲ. ‘ಪಕ್ಷದಿಂದ ಉಚ್ಚಾಟಿಸಿರುವುದರಿಂದ ಅವಮಾನ, ಮುಜುಗರ ಆಗಿಲ್ಲ. ಇದು ಮೊದಲೇ ಗೊತ್ತಿರುವ ವಿಚಾರ. ಗುಬ್ಬಿ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಿಸಿದ ಸಮಯದಲ್ಲೇ ಇಂತಹ ಬೆಳವಣಿಗೆಗಳು ನಡೆಯುತ್ತವೆ ಎಂಬುದು ಗೊತ್ತಿತ್ತು’ ಎಂದರು. ಇದರಿಂದ ನನಗೇನೂ ಬೇಸರವಿಲ್ಲ. ಈ ವಿದ್ಯಮಾನವನ್ನು ನಾನು ಸನ್ಮಾನ, ಅವಮಾನ, ಮುಜುಗರ ಅಂದು ಕೊಳ್ಳುವುದಿಲ್ಲ. ಒಂದು ವರ್ಷದ ಹಿಂದೆಯೇ ಇಲ್ಲಿ ಅಭ್ಯರ್ಥಿಯನ್ನು ಘೋಷಿಸಿದ್ದ ನಂತರ ಉಚ್ಛಾಟನೆಯ ನಿರೀಕ್ಷೆ ನನಗಿತ್ತು"ಎಂದು ಶ್ರೀನಿವಾಸ್ ಹೇಳಿದರು.

ಜೆಡಿಎಸ್ ವರಿಷ್ಠರಿಗೆ ನಾನು ಬೇಕಾಗಿರಲಿಲ್ಲ, ಹಾಗಾಗಿ ಈ ಉಚ್ಛಾಟನೆಯಲ್ಲಿ ನನಗೇನೂ ಹೊಸತನ ಕಾಣುತ್ತಿಲ್ಲ. ನಾನು ಜೆಡಿಎಸ್ ಪಕ್ಷದಿಂದ ಗೆದ್ದಿದ್ದೇನೆ, ಅದಕ್ಕೆ ರಾಜೀನಾಮೆಯನ್ನು ಕೊಡಬೇಕು. ಡಿಸೆಂಬರ್ ನಂತರ ನಾನು ರಾಜೀನಾಮೆ ನೀಡುತ್ತೇನೆ, ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುವೆ"ಎಂದು ಎಸ್.ಆರ್.ಶ್ರೀನಿವಾಸ್ ಸ್ಪಷ್ಟಪಡಿಸಿದರು.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಹಲವು ತಿಂಗಳುಗಳಿಂದ ಉತ್ತಮ ಒಡನಾಟ ಹೊಂದಿದ್ದ ಅವರು, 2023ರ ಚುನಾವಣೆಯಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವಂತೆ ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು

ಜೆಡಿಎಸ್ ಈಗಾಗಲೇ ಗುಬ್ಬಿಯಿಂದ ಒಕ್ಕಲಿಗ ನಾಯಕ  ಬಿ.ಎಸ್.ನಾಗರಾಜು ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.  ಶ್ರೀನಿವಾಸ್ ಮತ್ತು ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಕೋರಿ ಸ್ಪೀಕರ್‌ಗೆ ಶೀಘ್ರವೇ ಮನವಿ ಸಲ್ಲಿಸಲು ಜೆಡಿಎಸ್ ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com