ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೇವಲ ನನ್ನ ಅಭಿಪ್ರಾಯ: ತಿಪ್ಪೆ ಸಾರಿಸಿದ ಉಮೇಶ ಕತ್ತಿ

ವಿವಾದಕ್ಕೆ ಹೆಸರುವಾಸಿಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಇತ್ತೀಚೆಗೆ ತಾವು ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಮೇಶ್ ಕತ್ತಿ
ಉಮೇಶ್ ಕತ್ತಿ

ಕಲಬುರಗಿ: ವಿವಾದಕ್ಕೆ ಹೆಸರುವಾಸಿಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಇತ್ತೀಚೆಗೆ ತಾವು ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಕಿತ್ತೂರು ಕರ್ನಾಟಕದ ಹುಕ್ಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ವಿಚಾರ ನನ್ನ ವಯಕ್ತಿಕ ಅಭಿಪ್ರಾಯವೇ ಹೊರತು, ಜನರಲ್ಲಿ ಗಲಾಟೆ ಮತ್ತು ಅಶಾಂತಿ ಮೂಡಿಸುವ ಉದ್ದೇಶದಿಂದ ಹೇಳಿದ್ದಲ್ಲ ಎಂದು ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕವಾದ ರಾಜ್ಯದ ಬೇಡಿಕೆ ಅನೇಕ ವರ್ಷಗಳಿಂದ ಈ ಭಾಗದ ‌ಜನರ ಆಶ್ರಯ ಇದೆ. 2024ರ ಲೋಕಸಭೆ ಚುನಾವಣೆ ನಂತರ ನಮ್ಮ ದೇಶದಲ್ಲಿ ಬರುವ ದಿನಗಳಲ್ಲಿ 50 ರಾಜ್ಯಗಳು ಉದಯ ಆಗಲಿವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿರುವುದರಿಂದ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆ ಇದೆ ಎಂದು ಹೇಳಿದ್ದೆ, ಆದರೆ ಮಾಧ್ಯಮಗಳನ್ನು ನನ್ನ ಹೇಳಿಕೆಯನ್ನು ತಿರುಚಿವೆ ಎಂದು ಆರೋಪಿಸಿದ್ದಾರೆ.

ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಮತ್ತೆ ಸಮರ್ಥಿಸಿಕೊಂಡ ಸಚಿವರು, 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಹುಟ್ಟಿಕೊಳ್ಳಲಿವೆ. ಉತ್ತರ ಪ್ರದೇಶದಲ್ಲಿ ನಾಲ್ಕು, ಮಹಾರಾಷ್ಟ್ರದಲ್ಲಿ ಮೂರು ಹಾಗೂ ಕರ್ನಾಟಕದಲ್ಲಿ ಎರಡು ರಾಜ್ಯಗಳಾಗಲಿವೆ ಎಂದು ಅವರು ಹೇಳಿದರು. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳಿಗೆ ಪ್ರತ್ಯೇಕ ರಾಜ್ಯ ಸ್ಥಾನಮಾನದ ಬೇಡಿಕೆಯನ್ನು ಬಗ್ಗೆ ಪ್ರಶ್ನಿಸಿದ ಸುದ್ದಿಗಾರರಿಗೆ ಉತ್ತರಿಸಿದ ಅವರು ''ಜನಸಂಖ್ಯೆಯ ಆಧಾರದ ಮೇಲೆ ಹೊಸ ರಾಜ್ಯಗಳು ರಚನೆಯಾಗುತ್ತವೆ ಎಂದರು.

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕವನ್ನು ಪ್ರತ್ಯೇಕವಾಗಿ ರಚಿಸುವುದು ಅಸಾಧ್ಯ. ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ರಚನೆಗೆ ನಾವು ಬಲವಾಗಿ ಒತ್ತಾಯಿಸಿದರೆ, ಅವಕಾಶಗಳು ಉಜ್ವಲವಾಗಿವೆ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಎರಡರ ಸಂಸ್ಕೃತಿ, ಭಾಷೆ ಮತ್ತು ಆಹಾರವು ಒಂದೇ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಗಳು ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿರುವುದಕ್ಕೆ ಅಸಮಾಧಾನವಿದೆ ಎಂದು ಪುನರುಚ್ಚರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com