ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂ.ಸಿ.ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಮಾಜಿ ಶಾಸಕರಾದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಅವರು ಬುಧವಾರ ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ...
Published: 29th June 2022 08:39 PM | Last Updated: 30th June 2022 12:58 PM | A+A A-

ಮಂಜುನಾಥ್ ಹಾಗೂ ಎಂ.ಸಿ.ಸುಧಾಕರ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಮಾಜಿ ಶಾಸಕರಾದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಅವರು ಬುಧವಾರ ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ನಸೀರ್ ಅಹಮದ್, ಶಿವಶಂಕರ ರೆಡ್ಡಿ, ಶ್ರೀನಿವಾಸಗೌಡ, ನಂಜೇಗೌಡ, ಅನಿಲ್ ಕುಮಾರ್, ನಾರಾಯಣಸ್ವಾಮಿ ಹಾಜರಿದ್ದರು.
ಇದನ್ನು ಓದಿ: ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ! ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ?
ಈ ಕುರಿತು ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೊತ್ತೂರು ಮಂಜುನಾಥ್ ಹಾಗೂ ಎಂ ಸಿ ಸುಧಾಕರ್ ಅವರ ರಾಜಕೀಯ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಿದ್ದಾರೆ.
ಎಐಸಿಸಿ ವರಿಷ್ಠರಾದ @RahulGandhi ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಶಾಸಕರಾದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಅವರು ಇಂದು ಪಕ್ಷಕ್ಕೆ ಬರಮಾಡಿಕೊಂಡು, ರಾಜಕೀಯ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಿದೆ. 1/2 pic.twitter.com/hGERj7wb2Y
— Siddaramaiah (@siddaramaiah) June 29, 2022