ಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಸಂಪರ್ಕದಲ್ಲಿ: ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಫೋಟಕ ವಿಚಾರವೊಂದನ್ನು ಹೊರಗೆಡವಿದ್ದು, ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಫೋಟಕ ವಿಚಾರವೊಂದನ್ನು ಹೊರಗೆಡವಿದ್ದು, ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಮೊನ್ನೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕೊತ್ತೂರು ಮಂಜುನಾಥ್ ಹಾಗೂ ಎಂ.ಸಿ. ಸುಧಾಕರ್ ಅವರನ್ನು ಕಾಂಗ್ರೆಸ್ ಗೆ ಬರಮಾಡಿಕೊಂಡಿರುವ ಸಿದ್ದರಾಮಯ್ಯ, ಇನ್ನು ಬಿಜೆಪಿ ಹಾಗೂ ಜೆಡಿಎಸ್ ನಲ್ಲಿರುವ ಹಲವರನ್ನು ಕಾಂಗ್ರೆಸ್ ಗೆ ಬರಮಾಡಿಕೊಳ್ಳುವ ತವಕದಲ್ಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿಯಲ್ಲಿರುವವರೆಲ್ಲರೂ ಆರ್ ಎಸ್ ಎಸ್ ಮೂಲದವರಲ್ಲ. ಉದಾಹರಣೆಗೆ ಸಚಿವ ಎಸ್.ಟಿ. ಸೋಮಶೇಖರ್ ಆರ್ ಎಸ್ ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ ಎಂದಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೆಟ್ ನೀಡುತ್ತೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ. 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಬಿಜೆಪಿ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com