ವರ್ಷ ಕಳೆದರೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಬಾಕಿ: ಸಿಎಂ ಬೊಮ್ಮಾಯಿ ಮೇಲೆ ಒತ್ತಡ!

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಜುಲೈ ಅಂತ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ, ಆದರೆ ಇದುವರೆಗೆ ನಿಗಮ- ಮಂಡಳಿಗೆ ಅಧ್ಯಕ್ಷರನ್ನು ಮಾತ್ರ ನೇಮಕ ಮಾಡಿಲ್ಲ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಜುಲೈ ಅಂತ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ, ಆದರೆ ಇದುವರೆಗೆ ನಿಗಮ- ಮಂಡಳಿಗೆ ಅಧ್ಯಕ್ಷರನ್ನು ಮಾತ್ರ ನೇಮಕ ಮಾಡಿಲ್ಲ.

ರಾಜ್ಯವು 70 ಕ್ಕೂ ಹೆಚ್ಚು ಮಂಡಳಿಗಳು ಮತ್ತು ನಿಗಮಗಳನ್ನು ಹೊಂದಿದೆ, ಇವುಗಳಿಗೆ ಆಡಳಿತ ಪಕ್ಷದ ಶಾಸಕರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗುತ್ತದೆ. ಆದರೆ  ರಾಜ್ಯ ಸರ್ಕಾರ ಇನ್ನೂ ಹೆಸರನ್ನು ಅಂತಿಮಗೊಳಿಸಿಲ್ಲ.

2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನವೇ ನಿಗಮ-ಮಂಡಳಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು, ಮುಖ್ಯಮಂತ್ರಿಗಳಿಗೆ ನೇಮಕ ಮಾಡುವುದು ಸುಲಭವಲ್ಲ. ಸುಮಾರು 50 ಮಂಡಳಿಗಳು ಮತ್ತು ನಿಗಮಗಳು ಅಧ್ಯಕ್ಷರನ್ನು ಹೊಂದಿಲ್ಲ ಮತ್ತು ಈ ಘಟಕಗಳಲ್ಲಿ ಸಾಕಷ್ಟು ಹಣವಿಲ್ಲ ಬಿಜೆಪಿಯ ಹಿರಿಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

2019 ರಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ, 2020 ಮತ್ತು  2021 ರಲ್ಲಿ ಬಹುಪಾಲು ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರನ್ನು ನೇಮಿಸಿದರು. ಆದರೆ ಕಳೆದ ವರ್ಷ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ಅವರ ಅಧಿಕಾರಾವಧಿಯು ಹಠಾತ್ತನೆ ಕೊನೆಗೊಂಡಿತು. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಯಾವುದೇ ಅಧ್ಯಕ್ಷರನ್ನು ನೇಮಿಸಿಲ್ಲ.

ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರವರಿಗೆ ನಿಗಮ ಮಂಡಳಿಗೆ ನೇಮಕ ಮಾಡುವಂತೆ, ಹಲವು ಸಚಿವರು ಒತ್ತ ಹೇರುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ವಿಶ್ವಾಸದಲ್ಲಿರಿಸಿಕೊಳ್ಳಲು ಇದರಿಂದ ಸಹಾಯವಾಗುತ್ತದೆ ಎಂಬುದು ಅವರ ವಾದ, ಸದ್ಯಕ್ಕೆ ಸಂಪುಟ ಪುನಾರಚನೆಯಂತೂ ಸಾಧ್ಯವಿಲ್ಲ, ಕೊನೆಯ ಪಕ್ಷ ನಿಗಮ -ಮಂಡಳಿ ನೇಮಕವನ್ನಾದರೂ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ.

ಕಳೆದ ವರ್ಷ ಬೊಮ್ಮಾಯಿ ಅವರಿಗೆ ಉಪಚುನಾವಣೆ, ಎಂಎಲ್‌ಸಿ ಚುನಾವಣೆ ಸೇರಿದಂತೆ ಹಲವು ಸವಾಲುಗಳು ಎದುರಾಗಿದ್ದು, ವಿಳಂಬಕ್ಕೆ ಮತ್ತೊಂದು ಕಾರಣ ಎನ್ನಲಾಗಿದೆ.

ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರನ್ನು ಶೀಘ್ರದಲ್ಲೇ ನೇಮಕ ಮಾಡಲಾಗುವುದು ಎಂದು ಕಟೀಲ್ ಜನವರಿಯಲ್ಲಿ ಹೇಳಿದ್ದರು. ಆದರೆ ಆರು ತಿಂಗಳು ಕಳೆದರೂ ಏನೂ ಆಗಿಲ್ಲ. ಇನ್ನು ನಾಲ್ಕೈದು ದಿನಗಳಲ್ಲಿ ಪಟ್ಟಿ ಹೊರಬೀಳುವ ನಿರೀಕ್ಷೆ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.

ಯಡಿಯೂರಪ್ಪ ನೇಮಿಸಿದ ಹಲವು  ಅಧ್ಯಕ್ಷರನ್ನು ಬೊಮ್ಮಾಯಿ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಪಟ್ಟಿಗೆ ಪಕ್ಷದ ಹೈಕಮಾಂಡ್ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ, ಮಂಡಳಿ ಮತ್ತು ನಿಗಮಗಳ ಮುಖ್ಯಸ್ಥರ ಆಯ್ಕೆಗೆ ರಾಜ್ಯ ಮಟ್ಟದ ನಾಯಕರು ನಿರ್ಧರಿಸುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವ ಸಂಪುಟ ವಿಸ್ತರಣೆಗೆ ಬೊಮ್ಮಾಯಿ ಅವರ ಮೇಲೆ ಒತ್ತಡವಿದ್ದು, ಅದನ್ನು ದೆಹಲಿಯ ಪಕ್ಷದ ನಾಯಕರು ಅನುಮೋದಿಸಬೇಕಿದೆ. ಆದರೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕ  ಸ್ಥಳೀಯವಾಗಿ ನಿರ್ಧಾರವಾಗುವುದರಿಂದ ಇನ್ನೂ ಹೆಚ್ಚಿನ ಒತ್ತಡವಿದೆ” ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com